ರಾಣೆಬೆನ್ನೂರ: ಜಮೀನು ವಿವಾದಕ್ಕೆ ಸಂಬಂಧಿಸಿ ಅಂಗವಿಕಲ ರೈತನ ಮೇಲೆ ಹಲ್ಲೆ ಮಾಡಿದ ಘಟನೆ ತಾಲೂಕಿನ ಮೇಡ್ಲೇರಿ ಗ್ರಾಮದಲ್ಲಿ ನಡೆದಿದ್ದು, ಈ ಕುರಿತು ಗುರುವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಮದ ಗುಡ್ಡಪ್ಪ ಹೊಳಿಬಸಪ್ಪ ಬಿಲ್ಲಾಳ (50) ಎಂಬುವರ ಮೇಲೆ ಹಲ್ಲೆ ನಡೆದಿದ್ದು, ಚಿಕಿತ್ಸೆಗಾಗಿ ಅವರನ್ನು ನಗರದ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಣೇಶ ಬಸಪ್ಪ ಬಿಲ್ಲಾಳ ಸೇರಿ 17 ಜನರು ಹಲ್ಲೆ ಮಾಡಿದ್ದು, ಅವರ ವಿರುದ್ಧ ದೂರು ದಾಖಲಾಗಿದೆ.
ಗುಡ್ಡಪ್ಪ ಅಂಗವಿಕಲನಾಗಿದ್ದು, ಆತನಿಗೆ ಹಂಚಿಕೆಯಾಗಿರುವ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ಸಮಯದಲ್ಲಿ ಗಣೇಶ ಸೇರಿ 17 ಜನ ಏಕಾಏಕಿ ಬಂದವರೆ ಆತನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.