ರಾಣೆಬೆನ್ನೂರ: ಹಾವು ಕಚ್ಚಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕಜ್ಜರಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.
ಫಕ್ಕೀರಪ್ಪ ಶಿವಪ್ಪ ಅರಳಿಕಟ್ಟಿ (54) ಮೃತ ರೈತ.
ಇವರು ಜಮೀನಿನಲ್ಲಿ ನೀರು ಹಾಯಿಸಲು ಹೋದ ಸಮಯದಲ್ಲಿ ಹಾವು ಕಚ್ಚಿದೆ. ಇದರಿಂದಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.