ರಾಣೆಬೆನ್ನೂರಲ್ಲಿ ಚಿಕಿತ್ಸೆಗಾಗಿ ಪರದಾಡಿದ ಜನತೆ

17 HVR 10 A
Published on

ರಾಣೆಬೆನ್ನೂರ: ಪಶ್ಚಿಮ ಬಂಗಾಳ ರಾಜ್ಯ ಕೋಲ್ಕತ್ತಾದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಕಿರಿಯ ವೈದ್ಯೆಯ ಮೇಲಿನ ಅತ್ಯಾಚಾರ, ಹತ್ಯೆ ಹಾಗೂ ನಂತರ ನಡೆದ ದಾಂಧಲೆ ಖಂಡಿಸಿ ರಾಣೆಬೆನ್ನೂರ ನಗರ ಸೇರಿ ತಾಲೂಕಿನಾದ್ಯಂತ ವೈದ್ಯರು ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟಿಸಿದರು.
ತಾಲೂಕು ಆಸ್ಪತ್ರೆ ಸೇರಿದಂತೆ ಎಲ್ಲ ಖಾಸಗಿ ಆಸ್ಪತ್ರೆಗಳ ಓಪಿಡಿಗಳು ಬಂದ್ ಆಗಿದ್ದರಿಂದ ರೋಗಿಗಳು ಚಿಕಿತ್ಸೆ ಸಿಗದೇ ಪರದಾಡಿದರು. ನಗರದ ಹಲಗೇರಿ ರಸ್ತೆಯ ಸರ್ಕಾರಿ ತಾಲೂಕು ಆಸ್ಪತ್ರೆ ಹಾಗೂ ನಗರಸಭೆ ಕಚೇರಿ ಬಳಿಯ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ ಬೆಳಗ್ಗೆಯಿಂದಲೇ ಸಾಕಷ್ಟು ರೋಗಿಗಳು ಚಿಕಿತ್ಸೆಗಾಗಿ ಆಗಮಿಸಿದ್ದ ರೋಗಿಗಳು ವೈದ್ಯರ ಮುಷ್ಕರದಿಂದಾಗಿ ಚಿಕಿತ್ಸೆ ಪಡೆಯದೇ ವಾಪಸ್ ತೆರಳುವಂತಾಯಿತು. ಓಪಿಡಿ ಬಂದ್ ಇದ್ದ ಕಾರಣ ಸರ್ಕಾರಿ ಆಸ್ಪತ್ರೆ ಬಿಕೋ ಎನ್ನುತ್ತಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net