ಹಾವೇರಿ: ದುಡಿಯುವ ವರ್ಗದ ಜನರ ಹಾಗೂ ದಿನಗೂಲಿ ನೌಕರರಿಗೆ ಉಚಿತ ಆರೋಗ್ಯ ಸೇವೆ ನೀಡಲು ಹಾಗೂ ದೂರದ ರೆಫರಲ್ ಆಸ್ಪತ್ರೆಗಳಿಗೆ ತೆರಳುವುದನ್ನು ತಪ್ಪಿಸಲು ರಾಣೆಬೆನ್ನೂರ ನಗರದ ನಮ್ಮ ಕ್ಲಿನಿಕ್ ಆರೋಗ್ಯ ಸೇವೆಯ ಸಮಯವನ್ನು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 8 ಗಂಟೆವರೆಗೆ ಬದಲಾವಣೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ ತಿಳಿಸಿದ್ದಾರೆ.