ರಾಣೆಬೆನ್ನೂರಲ್ಲಿ ಜನತಾ ದರ್ಶನ 24ರಂದು

Published on

ಹಾವೇರಿ: ರಾಣೆಬೆನ್ನೂರ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ನ.24ರಂದು ರಾಣೆಬೆನ್ನೂರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜರುಗಲಿದೆ.
ರಾಣೆಬೆನ್ನೂರ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಕೌಂಟರ್‌ಗಳಲ್ಲಿ ಸಾರ್ವಜನಿಕ ಕುಂದುಕೊರತೆ ನಿವಾರಣೆ ವ್ಯವಸ್ಥೆ (ಐಪಿಜಿಆರ್‌ಎಸ್) ತಂತ್ರಾಂಶದಲ್ಲಿ ದಾಖಲಿಸಿಕೊಂಡು, ಸ್ವೀಕೃತಿ ಪಡೆದುಕೊಳ್ಳಬೇಕು. ಸ್ವೀಕೃತಿಗೊಂಡ ಅರ್ಜಿಗಳನ್ನು ಪರಿಶೀಲಿಸಿ ಕುಂದುಕೊರತೆಗಳಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net