ಕಿಶೋರ್.ಡಿ. ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ

mng-4nov-kishore .d. shetty
Published on


ಮಂಗಳೂರು : ರಂಗಚಾವಡಿ ಮಂಗಳೂರು ಇದರ ವತಿಯಿಂದ ನ.10ರಂದು ಸಾಯಂಕಾಲ 4.30ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ನಡೆಯಲಿದೆ. ಲಕುಮಿ ನಾಟಕ ತಂಡದ ವ್ಯವಸ್ಥಾಪಕ ಕಿಶೋರ್.ಡಿ. ಶೆಟ್ಟಿ ಅವರಿಗೆ 2024 ನೇ ಸಾಲಿನ ರಂಗಚಾವಡಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಮುಂಬೈಯ ಉದ್ಯಮಿ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಚಲನ ಚಿತ್ರ ನಿರ್ಮಾಪಕ ಡಾ.ಸಂಜೀವ ದಂಡೆಕೇರಿ, ಗಿರೀಶ್.ಎಂ ಶೆಟ್ಟಿ ಕಟೀಲು, ಚಿತ್ರ ನಿರ್ಮಾಪಕರಾದ ಚಂದ್ರಶೇಖರ ಮಾಡ , ಪ್ರಕಾಶ್ ಪಾಂಡೇಶ್ವರ ,ಥಾಣೆ ಬಂಟ್ಸ್ ಅಸೋಸಿಯೇಶನ್‌ನ ಮಾಜಿ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ಉದ್ಯಮಿ ಜಗದೀಶ್ ಶೆಟ್ಟಿ ಪೆರ್ಮುದೆ, ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಪೂಂಜ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಎಂ.ಲೋಕಯ್ಯ ಶೆಟ್ಟಿ,
ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಪೇರ್ ಅಸೋಸಿಯೇಶನ್‌ನ ಅಧ್ಯಕ್ಷ ರಮೇಶ್ ಶೆಟ್ಟಿ ಭಾಗವಹಿಸಲಿದ್ದಾರೆ. ಬಳಿಕ ಶ್ರೀ ಲಲಿತೆ ನಾಟಕ ತಂಡದಿಂದ ಶನಿ ಮಹಾತ್ಮೆ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net