

ಮೈಸೂರು: ಅಭಿಯಂತರರ ಸಂಸ್ಥೆಯ 30ನೇ ವಾರ್ಷಿಕೋತ್ಸವ ಅಂಗವಾಗಿ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಡಿ.8ರಿಂದ 10ರವರೆಗೆ ಮೂರು ದಿನಗಳ ‘ರಂಗ ಸಂಭ್ರಮ ಉತ್ಸವ’ ಆಯೋಜಿಸಲಾಗಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.
ಡಿ.8ರಂದು ಸಂಜೆ 6.30ಕ್ಕೆ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ ಹಾಗೂ ಚಿಂತಕ ಪ್ರೊ.ಕಾಳೇಗೌಡ ನಾಗವಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ‘ಅಭಿಯಂತರರು’ ಶೀರ್ಷಿಕೆಯಡಿ ರಾಜಶೇಖರ ಕದಂಬ ಅವರ ಸಂಪಾದಕತ್ವದಲ್ಲಿ ಹೊರತಂದಿರುವ ಸ್ಮರಣ ಸಂಚಿಕೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ಬಿಡುಗಡೆ ಮಾಡಲಿದ್ದಾರೆ.
ಹಿರಿಯ ರಂಗಕರ್ಮಿಗಳಾದ ರಾಜಶೇಖರ ಕದಂಬ, ರಾಜೇಂದ್ರ ಕಾರಂತ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಸಂಸ್ಥಾಪನಾ ಸದಸ್ಯ ಎಚ್.ಎಸ್.ಸುರೇಶ್‌ಬಾಬು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.