

ವಿಜಯವಾಣಿ ಸುದ್ದಿಜಾಲ ಉಡುಪಿ
ರಾಜ್ಯದ ಹೆಸರಾಂತ ಹವ್ಯಾಸಿ ನಾಟಕ ಸಂಸ್ಥೆಯಾದ ರಂಗಭೂಮಿ (ರಿ.) ಉಡುಪಿ ತನ್ನ 61ನೇ ವಾರ್ಷಿಕೋತ್ಸವದ ನಿಮಿತ್ತ ನವಂಬರ್ ತಿಂಗಳ ಕೊನೆಯ ವಾರದಲ್ಲಿ ಡಾ.ಟಿಎಂಎ ಪೈ, ಎಸ್.ಎಲ್. ನಾರಾಯಣ ಭಟ್ ಮತ್ತು ಮಲ್ಪೆ ಮಧ್ವರಾಜ್ ಸ್ಮಾರಕ ರಾಜ್ಯ ಮಟ್ಟದ 46ನೇ ಕನ್ನಡ ನಾಟಕ ಸ್ಪರ್ಧೆ ಆಯೋಜಿಸಿದೆ.
ರಾಜ್ಯದ (ಕಾಸರಗೋಡು ಸಹಿತ) ಯಾವುದೇ ಪ್ರದೇಶದ ಹವ್ಯಾಸಿ ನಾಟಕ ತಂಡ ಸ್ಪರ್ಧಿಸಬಹುದು. ಕನಿಷ್ಠ 1 ಗಂಟೆ 30 ನಿಮಿಷ ಹಾಗೂ ಗರಿಷ್ಠ 2 ಗಂಟೆ 15 ನಿಮಿಷ ಅವಧಿಯ ಸಾಮಾಜಿಕ, ಐತಿಹಾಸಿಕ, ಪೌರಾಣಿಕ, ಜಾನಪದ ಅಥವಾ ಯಾವುದೇ ಪ್ರಕಾರದ ನಾಟಕ ಪ್ರದರ್ಶಿಸಬಹುದು.
ಈ ಬಾರಿ ಸ್ಪರ್ಧೆಗೆ ಗರಿಷ್ಠ 12 ತಂಡ ಮಾತ್ರ ಆಯ್ಕೆ ಮಾಡಲಾಗುತ್ತಿದ್ದು, ವಿಜೇತ ತಂಡಗಳಿಗೆ ಪ್ರಥಮ 35 ಸಾವಿರ ರೂ., ದ್ವಿತೀಯ 25 ಸಾವಿರ ರೂ. ಹಾಗೂ ತೃತೀಯ 15 ಸಾವಿರ ರೂ. ನಗದು ಬಹುಮಾನ ಹಾಗೂ ಪರ್ಯಾಯ ಫಲಕ ನೀಡಲಾಗುವುದು. ನಾಟಕ ತಂಡಗಳಿಗೆ ವಿವಿಧ ವಿಭಾಗಗಳಿಗೂ ವಿಶೇಷ ಪುರಸ್ಕಾರ ನೀಡಲಾಗುವುದು. ಭಾಗವಹಿಸುವ ತಂಡಗಳಿಗೆ ಉಚಿತ ಊಟ, ವಸತಿ ವ್ಯವಸ್ಥೆಯಿದೆ. ಪ್ರತಿ ತಂಡಕ್ಕೆ 5 ಸಾವಿರ ರೂ. ಗೌರವಧನ ನೀಡಲಾಗುವುದು. ಪ್ರವೇಶ ಪತ್ರ ಸ್ವೀಕರಿಸಲು ಅ.30 ಕೊನೆಯ ದಿನ.
ಆಸಕ್ತ ತಂಡಗಳು ಪ್ರದೀಪ್ಚಂದ್ರ ಕುತ್ಪಾಡಿ, ಪ್ರಧಾನ ಕಾರ್ಯದರ್ಶಿ, ರಂಗಭೂಮಿ, ಕುತ್ಪಾಡಿ, ಉಡುಪಿ- 574118, ಮೊ.ಸಂ. 9448952847 ಸಂಪರ್ಕಿಸಬಹುದು. ಅಥವಾ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು (9844742166), ಸಹ ಕಾರ್ಯದರ್ಶಿಗಳಾದ ಶ್ರೀಪಾದ ಹೆಗಡೆ (9845111449), ವಿವೇಕಾನಂದ ಎನ್. (9449367595) ಅವರನ್ನು ಸಂಪರ್ಕಿಸಬಹುದು ಎಂದು ರಂಗಭೂಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.