ರಂಗಭೂಮಿ ಸಂಸ್ಕೃತಿ ಸಂಭ್ರಮದ ಸಡಗರ

udp-22-talluru shivarama shetty
Published on

ಉಡುಪಿ: ಕನ್ನಡ ಮತ್ತು ಸಂಸತಿ ಇಲಾಖೆ, ಯಕ್ಷಗಾನ ಅಕಾಡೆಮಿ, ಜಾನಪದ ಅಕಾಡೆಮಿ ಮತ್ತು ನಾಟಕ ಅಕಾಡೆಮಿ, ರಂಗಭೂಮಿ ಸಹಯೋಗದಲ್ಲಿ ಗೊಂಬೆಯಾಟ, ಜಾನಪದ ಕಲೆ, ಸಂಗೀತ, ನಾಟಕಗಳು ಮೇಲೈಸಿದ ಸಂಸತಿ ಸಂಭ್ರಮ ಕಾರ್ಯಕ್ರಮ ಜುಲೈ 25 ಮತ್ತು 26ರಂದು ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಹಾಗೂ ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

25ರಂದು 4ಗಂಟೆಗೆ ಸಮಾರಂಭವನ್ನು ಮಾಹೆ ಸಹಕುಲಾಧಿಪತಿ ಡಾ. ಎಚ್​. ಎಸ್​. ಬಲ್ಲಾಳ್​ ಉದ್ಘಾಟಿಸಲಿದ್ದಾರೆ. ಶಾಸಕ ಯಶ್​ ಪಾಲ್​ ಸುವರ್ಣ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ವಿಧಾನ ಪರಿಷತ್​ ಸದಸ್ಯ ಮಂಜುನಾಥ ಭಂಡಾರಿ, ಉದ್ಯಮಿ ರವೀಂದ್ರ ಶೆಟ್ಟಿ ಕಡೆಕಾರ್​, ಕರ್ನಾಟಕ ನಾಟಕ ಅಕಾಡಮಿಯ ಜಿಲ್ಲಾ ಸಂಚಾಲಕ ಸಂತೋಷ್​ ನಾಯಕ್​ ಪಟ್ಲ ಮತ್ತು ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ನಾಟಕ ಅಕಾಡೆಮಿ ಅಧ್ಯಕ್ಷ ಡಾ. ಕೆ. ವಿ. ನಾಗರಾಜಮೂರ್ತಿ ಅವರನ್ನು ಸನ್ಮಾನಿಸಲಾಗುವುದು ಎಂದರು.

26ರಂದು ಸಾಯಂಕಾಲ 5ಕ್ಕೆ ಸಮಾರೋಪ ಸಮಾರಂಭವನ್ನು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳ್​ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ವಿನಯ ಕುಮಾರ್​ ಸೊರಕೆ,ಉದ್ಯಮಿ ಪ್ರಸಾದ್​ ರಾಜ್​ ಕಾಂಚನ್​, ಜಾನಪದ ಅಕಾಡಮಿ ಸದಸ್ಯ ಸಯ್ಯದ್​ ಜಮೀರುಲ್ಲಾ ಷರೀಫ್​, ಬಂಟರ ಯಾನೆ ನಾಡವರ ಮಾತೃ ಸಂಘದ ಉಪ ಸಂಚಾಲಕ ಕೆ. ದಿನೇಶ್​ ಹೆಗ್ಡೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ಜಾನಪದ ಅಕಾಡಮಿ ಅಧ್ಯಕ್ಷ, ಜಾನಪದ ವಿದ್ವಾಂಸ ಗೊಲ್ಲಹಳ್ಳಿ ಶಿವಪ್ರಸಾದ್​ ಅವರನ್ನು ಸನ್ಮಾನಿಸಲಾಗುವುದು ಎಂದರು.

ಕರ್ನಾಟಕ ಜಾನಪದ ಪರಿಷತ್​ ಪ್ರಧಾನ ಕಾರ್ಯದರ್ಶಿ ರವಿರಾಜ ನಾಯಕ್​ ಮಾತನಾಡಿ, ಪ್ರಥಮ ದಿನ ಮಧ್ಯಾಹ್ನ 2 ಗಂಟೆಗೆ ಸುಪ್ರಸಿದ್ಧ ಕಾಸರಗೋಡು ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಕೆ.ವಿ. ರಮೇಶ್​ ನಿರ್ದೇಶನದಲ್ಲಿ ನರಕಾಸುರ ವಧೆ ಮತ್ತು ಗರುಡ ಗರ್ವಭಂಗ ಎಂಬ ತೆಂಕುತಿಟ್ಟು ಯಕ್ಷಗಾನ ಗೊಂಬೆಯಾಟ ನಡೆಯಲಿದೆ. ಜಾನಪದ ಕಲಾ ಪ್ರದರ್ಶನದಲ್ಲಿ ಶಿವಮೊಗ್ಗ ಜಿಲ್ಲೆಯ ಟಾಕಪ್ಪ ಮತ್ತು ತಂಡದವರಿಂದ ಡೊಳ್ಳು ಕುಣಿತ, ಬೆಂಗಳೂರು ನಗರ ಜಿಲ್ಲೆಯ ಮಹದೇವಮೂರ್ತಿ ಮತ್ತು ತಂಡದವರಿಂದ ಕಂಸಾಳೆ ನೃತ್ಯಗಳು ಪ್ರದರ್ಶಿತಗೊಳ್ಳಲಿವೆ ಎಂದರು.

ರಂಗಭೂಮಿ ಪ್ರಧಾನ ಕಾರ್ಯದರ್ಶಿ ಪ್ರದಿಪ್​ ಚಂದ್ರ ಕುತ್ಪಾಡಿ, ಉಪಾಧ್ಯಕ್ಷ ಎನ್​. ಆರ್​. ಬಲ್ಲಾಳ್​, ಜೊತೆ ಕಾರ್ಯದರ್ಶಿ ಶ್ರೀಪಾದ ಹೆಗಡೆ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net