6 ರಂಗಾಯಣಗಳಿಗೆ ನಿರ್ದೇಶಕರ ನೇಮಕ

New Project (16)
Published on

ಬೆಂಗಳೂರು: ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

ಮೈಸೂರು ರಂಗಾಯಣ ನಿರ್ದೇಶಕರಾಗಿ ಸತೀಶ್ ತಿಪಟೂರು, ಧಾರವಾಡಕ್ಕೆ ರಾಜು ತಾಳಿಕೋಟೆ, ಶಿವಮೊಗ್ಗಕ್ಕೆ ಪ್ರಸನ್ನ ಡಿ.ಸಾಗರ, ಕಲಬುರಗಿಗೆ ಡಾ. ಸುಜಾತ ಜಂಗಮ ಶೆಟ್ಟಿ, ದಾವಣಗೆರೆಯ ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ ಹಾಗೂ ಕಾರ್ಕಳದ ಯಕ್ಷ ರಂಗಾಯಣ ನಿರ್ದೇಶಕರಾಗಿ ವೆಂಕಟರಮಣ ಐತಾಳ ನೇಮಕಗೊಂಡಿದ್ದಾರೆ.

ಈ ಕುರಿತು ಸಚಿವ ಶಿವರಾಜ ತಂಗಡಗಿ,  ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳು ವೇಗ ಪಡೆದುಕೊಳ್ಳಲಿವೆ. ಇದರೊಂದಿಗೆ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ನೂತನ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net