ರಾಣಿ ಅಬ್ಬಕ್ಕಳ ಜೀವನವೇ ಪ್ರೇರಣಾದಾಯಕ

gan (11)
Published on

ಕುಂದಾಪುರ: ರಾಣಿ ಅಬ್ಬಕ್ಕಳ ಶೌರ್ಯ, ಧೈರ್ಯ, ಸಾಹಸವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವಳ ಜೀವನವೇ ಇಂದಿನ ಯುವಜನಾಂಗಕ್ಕೆ ಪ್ರೇರಣಾದಾಯಕ ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಹೇಳಿದರು.

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂ, ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞ್ಞಾನ ಕಾಲೇಜು ಸಹಯೋಗದಲ್ಲಿ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಬ್ಬಕ್ಕ 500 ಪ್ರೇರಣದಾಯಿ 100 ಉಪನ್ಯಾಸಗಳ ಸರಣಿ-ಎಸಳು 42 ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ವಾತನಾಡಿದರು.

ರಾಣಿ ಅಬ್ಬಕ್ಕ ಕುರಿತು ವಿಶೇಷ ಉಪನ್ಯಾಸ ನೀಡಿದ ವೃತ್ತಿ ವಾರ್ಗದರ್ಶಕಿ ಸತ್ಯಶ್ರೀ ಗೌತಮ್, ರಾಣಿ ಅಬ್ಬಕ್ಕ ಅವರ ಜೀವನ, ಧೈರ್ಯ ಸಾಹಸ ಎಂದಿಗೂ ಆದರ್ಶ ಎಂದರು. ಭಂಡಾರ್ಕಾರ್ಸ್ ಪದವಿ ಕಾಲೇಜು ಪ್ರಾಂಶುಪಾಲ ಡಾ.ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು.

ಭಂಡಾರ್ಕಾರ್ಸ್ ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಯು.ಎಸ್.ಶೆಣೈ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಎಸ್.ಆರ್.ವಿಜಯ್ ಕುವಾರ್, ಗೌರವ ಕಾರ್ಯದರ್ಶಿ ಪಾಟೀಲ್ ಪಾಂಡು, ಕೇರಳ ಗಡಿನಾಡು ಟಕ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಉಪಸ್ಥಿತರಿದ್ದರು. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂ ಮಂಗಳೂರು ವಿಭಾಗ ಕಾರ್ಯದರ್ಶಿ ಡಾ.ವಾಧವ ಸ್ವಾಗತಿಸಿದರು. ಕಾರ್ಯಕ್ರಮದ ಕಾಲೇಜು ಸಂಯೋಜಕ ಶಂಕರನಾರಾಯಣ ವಂದಿಸಿದರು. ಉಪನ್ಯಾಸಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net