ಯುವ ಪೀಳಿಗೆಗೆ ಮಹನೀಯರ ಇತಿಹಾಸ ತಿಳಿಸಬೇಕಿದೆ - ಸಚಿವ ಶಿವರಾಜ್ ತಂಗಡಗಿ ಅಭಿಮತ

Raghu_23_Kithur_Rani_Channamma_Jayanthi_@_Ravindra_Kalakshetra (1)
Minister for Kannada and Culture Shivaraj Thangadagi with Former Minister Rani Satish and others during the Kithur Rani Channamma Jayanthi celebrations at Ravindra Kalakshetra , in Bengaluru on Thursday 23rd October 2025
Published on

ಬೆಂಗಳೂರು:  ಪ್ರಸ್ತುತ ಮೊಬೈಲ್ ಸೇರಿ ಸಾಮಾಜಿಕ ಜಾಲತಾಣಗಳ ಗೀಳಿಗೆ ಬಿದ್ದಿರುವ ಯುವ ಪೀಳಿಗೆಗೆ ಓದುವ ಆಸಕ್ತಿ ಮೂಡಿಸುವುದರ ಜತೆಗೆ ಮಹನೀಯರ ಇತಿಹಾಸ ತಿಳಿಸುವ ತುರ್ತು ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅಭಿಪ್ರಾಯಪಟ್ಟರು.

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಕನ್ನಡ ಭವನದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣೆಂದರೆ ಶಕ್ತಿದೇವತೆ. ಹೆಣ್ಣೊಬ್ಬಳು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬ ಪರಮಸತ್ಯವನ್ನು ಜಗತ್ತಿಗೆ ಸಾರಿದವರಲ್ಲಿ ರಾಣಿ ಚೆನ್ನಮ್ಮಸಹ ಒಬ್ಬರು. ಅವರು ಅಸೀಮ ಶೌರ್ಯ, ಧೈರ್ಯ, ತ್ಯಾಗ, ರಾಜನೀತಿ, ಮಾತೃವಾತ್ಸಲ್ಯದ ಮೂಲಕ ಸದ್ಗುಣಗಳ ಖನಿ ಆಗಿದ್ದರು. ಇದು ರಾಣಿ ಚೆನ್ನಮ್ಮ ಅವರ ಜಯಂತಿ ಆಚರಣೆ ಆದರೂ, ವಾಸ್ತವವಾಗಿ ಇದು ಕಿತ್ತೂರು ಸಂಸ್ಥಾನ ಬ್ರಿಟೀಷರ ವಿರುದ್ಧ ವಿಜಯೋತ್ಸವ ಸಾಧಿಸಿದ ದಿನವಾಗಿದೆ. ಇದೇ ದಿನ ಥ್ಯಾಕರೆಯ ಮರಣವೂ ಆಯಿತು. ಈ ದಿನವನ್ನು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಗಿ ಆಚರಿಸಲು 2017ರಲ್ಲಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತು ಎಂದು ಹೇಳಿದರು.

ಭಾರತದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿಯಾದ ಇಂತಹ ಮಹಾಮಾತೆಯ ಜಯಂತಿ ಆಚರಿಸುವ ಮೂಲಕ ಆ ಮಹಾನ್ ಚೇತನದ ಸ್ಮರಣೆ ಮಾಡಿಕೊಳ್ಳುವ ಸೌಭಾಗ್ಯ ನಮ್ಮದಾಗಿದೆ ಎಂದು ಸಚಿವರು ವಿವರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ರಾಣಿ ಸತೀಶ್, ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ, ಲೇಖಕ ಡಾ. ಮಹಾಂತೇಶ ಬಿರಾದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಗಾಯಿತ್ರಿದೇವಿ, ಜಂಟಿ ನಿರ್ದೇಶಕರಾದ ಬನಶಂಕರಿ ಅಂಗಡಿ, ಬಲವಂತರಾಯ ಪಾಟೀಲ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net