ರ‍್ಯಾಂಕ್ ವಿದ್ಯಾರ್ಥಿನಿಗೆ ಸನ್ಮಾನ

rank
Published on

ಕುಶಾಲನಗರ:

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿAಗ್ ವಿಭಾಗದಲ್ಲಿ 2ನೇ ರ‍್ಯಾಂಕ್ ಪಡೆದ ವಿ.ಜೆ. ಜಾಯ್ಸ್ ಲೀನಾ ಅವರಿಗೆ ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನಲ್ಲಿ ಶನಿವಾರ ಸನ್ಮಾನಿಸಿ ಗೌರವಿಸಲಾಯಿತು. ಕಾಲೇಜಿನ ಪ್ರಾಂಶುಪಾಲರ ಕಚೇರಿಯಲ್ಲಿ ವಿದ್ಯಾರ್ಥಿನಿಯ ಪೋಷಕರಾದ ಜೋಸೆಫ್ ವಂದನಾಥ್ ಮತ್ತು ಜೋಸೆಫಿನ್ ಸಮ್ಮುಖದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಐ. ಪರಶಿವಮೂರ್ತಿ ವಿದ್ಯಾರ್ಥಿಯ ಸಾಧನೆ ಕುರಿತು ಶ್ಲಾಘಿಸಿದರು. ಕಾಲೇಜಿನಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳು ಹೊಂದಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆಯಬೇಕಾಗಿದೆ. ಸಾಧನೆಯ ಮೂಲಕ ಕಾಲೇಜು ರಾಜ್ಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿರುವುದು ಶ್ಲಾಘನೀಯ ಅಂಶವಾಗಿದೆ ಎಂದು ವಿದ್ಯಾರ್ಥಿನಿಯ ಬಗ್ಗೆ ಹೆಮ್ಮೆ ವ್ಯಕ್ತ ಪಡಿಸಿದರು.

ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ಎನ್.ಎಸ್ ಸತೀಶ್ ಮಾತನಾಡಿ, ವಿದ್ಯಾರ್ಥಿನಿಯ ಪರಿಶ್ರಮ ಹಾಗೂ ಕಾಲೇಜಿನಲ್ಲಿ ತರಗತಿಗಳ ಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಯ ಭಾಗವಹಿಸುವಿಕೆ ಮತ್ತು ಸಾಧನೆಯ ಬಗ್ಗೆ ಸಂತೋಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದರು. ಬಡ ಆಟೋ ಚಾಲಕನ ಪುತ್ರಿಯಾಗಿರುವ ಜಾಯ್ಸ್ ಲೀನಾ ಅವರ ಮುಂದಿನ ಉನ್ನತ ವ್ಯಾಸಂಗಕ್ಕೆ ಸಂಘ ಸಂಸ್ಥೆಗಳ ಮೂಲಕ ಸಹಾಯದ ಅವಶ್ಯಕತೆ ಇರುವುದಾಗಿ ತಿಳಿಸಿದರು.

ಈ ಸಂದರ್ಭ ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗದ ಮುಖ್ಯಸ್ಥರಾದ ಡಾ ಸೀನಪ್ಪ, ಕಂಪ್ಯೂಟರ್ ವಿಭಾಗದ ಶಿಕ್ಷಕ ಶ್ರೀನಾಥ್ ಅವರುಗಳು ಮಾತನಾಡಿ ವಿದ್ಯಾರ್ಥಿಯ ಪರಿಶ್ರಮಕ್ಕೆ ಅಭಿನಂದನೆ ಸಲ್ಲಿಸಿದರು.

ಸನ್ಮಾನಿತ ರ‍್ಯಾಂಕ್ ವಿದ್ಯಾರ್ಥಿನಿ ಜಾಯ್ಸ್ ಲೀನಾ ಮಾತನಾಡಿ, ತನಗೆ ಸಾಧನೆಗೆ ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ವರ್ಗವೇ ಕಾರಣ. ಮುಂದೆ ಉನ್ನತ ಶಿಕ್ಷಣ ಪಡೆಯುವ ಗುರಿ ಹೊಂದಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ. ನವೀನ್, ಡಾ ರೂಪ, ಡಾ. ಜಗದೀಶ್, ಡಾ. ಪವಿತ್ರ ಮತ್ತು ಬೋಧಕ, ಬೋಧಕೇತರ ವರ್ಗ ಹಾಗೂ ಸಿಬ್ಬಂದಿ ವರ್ಗ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net