ರ‍್ಯಾಂಕ್ ವಿಜೇತ ವಿದ್ಯಾರ್ಥಿ ಅನಾರೋಗ್ಯದಿಂದ ಮೃತ್ಯು

adhithya web
Published on

ಬಂಟ್ವಾಳ: ಮಂಗಳೂರು ವಿಶ್ವವಿದ್ಯಾಲಯ ಕಳೆದ ಸಾಲಿನಲ್ಲಿ ನಡೆಸಿದ ಬಿಕಾಂ ಅಂತಿಮ ಪದವಿ ಪರೀಕ್ಷೆಯಲ್ಲಿ 9ನೇ ರ‍್ಯಾಂಕ್ ಗಳಿಸಿದ್ದ ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿ ಆದಿತ್ಯ ಭಟ್(21) ಗುರುವಾರ ನಿಧನರಾದರು. ಅವರು ಮಾಂಸಖಂಡಗಳ ಕ್ಷೀಣತೆ ಸಮಸ್ಯೆಯಿಂದ ಬಳಲುತ್ತಿದ್ದರು.

ಅನಾರೋಗ್ಯ ಪರಿಣಾಮ ನಡೆಯಲಾಗದ ಸ್ಥಿತಿಯಲ್ಲಿದ್ದ ಅವರನ್ನು ತಂದೆ ಗಣೇಶ ಭಟ್ ಪ್ರತಿದಿನ ಕಾಲೇಜಿಗೆ ಕರೆ ತರುತ್ತಿದ್ದರು. ತರಗತಿಯಲ್ಲಿ ಗಾಲಿ ಕುರ್ಚಿಯಲ್ಲಿಯೇ ಕುಳಿತು ಪಾಠ ಕೇಳುತ್ತಿದ್ದರು. ಬಂಟ್ವಾಳದ ಸೂರಿಕುಮೇರು ನಿವಾಸಿ ಆದಿತ್ಯ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಎಸ್ಸೆಸ್ಸೆಲ್ಸಿಯಲ್ಲಿ ಶೇ.96.4 , ಪಿಯುಸಿಯಲ್ಲಿ ಶೇ.96 ಅಂಕ ಪಡೆದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net