ಅತ್ಯಾಚಾರ, ಕೊಲೆ ಅಪರಾಧಿಗೆ ಕಠಿನ ಜೀವಾವಧಿ ಶಿಕ್ಷೆ

Gavel on desk. Isolated with good copy space. Dramatic lighting.
Gavel on desk. Isolated with good copy space. Dramatic lighting.
Published on

ಮಂಗಳೂರು: ಮಹಿಳೆಯ ಅತ್ಯಾಚಾರ, ಹತ್ಯೆ ಪ್ರಕರಣದ ಅಪರಾಧಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿನ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.


ಮಂಜೇಶ್ವರರ ಪಾತೂರು ವರ್ಕಾಡಿ ಬದಿಮಾಲೆ ನಿವಾಸಿ ಮಹಮ್ಮದ್ ಅಶ್ರ್ ಯಾನೆ ಅಶ್ರ್ (33) ಶಿಕ್ಷೆಗೊಳಗಾದವನು. ಈತ 2020ರ ಸೆ.24ರಂದು ಬಾಳೆಪುಣಿ ಗ್ರಾಮದ ಬೆಳ್ಕೇರಿಯ ಒಂಟಿ ಮಹಿಳೆಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಅತ್ಯಾಚಾರವೆಸಗಿ ಹತ್ಯೆಗೈದಿದ್ದ. ಬಳಿಕ ಬೆಂಕಿ ಹಚ್ಚಿ ಸಾಕ್ಷೃ ನಾಶ ಮಾಡಿದ್ದ. ಚಿನ್ನ, ಹಣ ದೋಚಿ ಪರಾರಿಯಾಗಿದ್ದ.


ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕಾಂತರಾಜು ಎಸ್.ವಿ ಅವರು ಅಪರಾಧಿಗೆ ಐಪಿಸಿ ಕಲಂ 302ರಡಿ ಕಠಿನ ಜೀವಾವಧಿ ಶಿಕ್ಷೆ ಮತ್ತು 1 ಲ.ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 2 ವರ್ಷ ಸಜೆ, ಕಲಂ 448ರಡಿ 1 ವರ್ಷ ಕಠಿನ ಸಜೆ, 1,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 3 ತಿಂಗಳ ಸಜೆ, ಕಲಂ 376ರಡಿ 10 ವರ್ಷ ಕಠಿನ ಸಜೆ, 1 ಲ.ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 1 ವರ್ಷ ಕಠಿನ ಸಜೆ, ಕಲಂ 392ರಡಿ 10 ವರ್ಷ ಕಠಿನ ಸಜೆ, 50,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 6 ತಿಂಗಳು ಹೆಚ್ಚುವರಿ ಕಠಿನ ಸಜೆ, ಕಲಂ 201ರಡಿ 7 ವರ್ಷ ಕಠಿನ ಸಜೆ, 50,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 1 ವರ್ಷ ದಂಡ ವಿಧಿಸಿದ್ದಾರೆ.


ಮಂಗಳೂರು ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತ ರಂಜಿತ್ ಕುಮಾರ್ ಬಂಡಾರು ವಿಶೇಷ ತನಿಖಾಧಿಕಾರಿಯಾಗಿದ್ದು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜಕರಾದ ಜ್ಯೋತಿ ಪ್ರಮೋದ್ ನಾಯಕ್ ಮತ್ತು ಬಿ. ಶೇಖರ್ ಶೆಟ್ಟಿ ವಾದಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net