

ಬಂಟ್ವಾಳ: ಯುವತಿಯೋರ್ವಳನ್ನು ಚಿಕ್ಕಪ್ಪ ಅತ್ಯಾಚಾರವೆಸಗಿದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತಾಲೂಕಿನ ಸಜೀಪಮುನ್ನೂರು ಗ್ರಾ.ಪಂ. ವ್ಯಾಪ್ತಿಯ ಪುರುಷೋತ್ತಮ್ ಎಂಬಾತ ತನ್ನ ಪತ್ನಿಯ ಅಕ್ಕನ ಮಗಳನ್ನೇ ಅತ್ಯಾಚಾರಕ್ಕೆ ಬಳಸಿಕೊಂಡಿದ್ದಾನೆ ಎಂದು ದೂರಲಾಗಿದೆ.
ಕಳೆದ ಒಂದು ವರ್ಷದಿಂದ ಯುವತಿ ಬಿ.ಸಿ.ರೋಡು ಸಮೀಪದ ಭಂಡಾರಿಬೆಟ್ಟು ಎಂಬಲ್ಲಿ ಅಜ್ಜಿ ಮನೆಯಲ್ಲಿ ವಾಸವಿದ್ದು, ಅಲ್ಲಿಂದಲೇ ಕಾಲೇಜಿಗೆ ಹೋಗುತ್ತಿದ್ದಳು. ಆರೋಪಿ ಪುರುಷೋತ್ತಮ ಅದೇ ಮನೆಯಲ್ಲಿ ತನ್ನ ಪತ್ನಿ, ಮಕ್ಕಳೊಂದಿಗೆ ವಾಸವಿದ್ದು ಯುವತಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ವಿಷಯವನ್ನು ಮನೆ ಮಂದಿಗೆ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾನೆ. ಈತನ ಹಿಂಸೆ ತಾಳಲಾರದೆ ಸಂತ್ರಸ್ತ ಯುವತಿ ಮನೆ ಮಂದಿಗೆ ಘಟನೆಯನ್ನು ತಿಳಿಸಿ ಪೊಲೀಸರಿಗೆ ದೂರು ನೀಡಿದ್ದು, ಅತ್ಯಾಚಾರ ಪ್ರಕರಣ ದಾಖಲಾಗಿದೆ.