ಮಹಿಳೆಯ ಮಾನಭಂಗಕ್ಕೆ ಯತ್ನಿಸಿದಾತನ ಸೆರೆ

ISM- sep15- 2
Published on

ಮಹಿಳೆಯ ಮಾನಭಂಗಕ್ಕೆ ಯತ್ನಿಸಿದಾತನ ಸೆರೆ
ಈಶ್ವರಮಂಗಲ: ಕೆದಂಬಾಡಿ ಗ್ರಾಮದ ತಿಂಗಳಾಡಿಯ ಅಂಗಡಿಯೊಂದಕ್ಕೆ ಸಿಹಿತಿಂಡಿ ಖರೀದಿಸಲು ಬಂದಿದ್ದ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಪ್ರಕರಣದ ಆರೋಪಿ ಬದ್ರುದ್ದೀನ್ ಎಂಬಾತನನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ಮಹಿಳೆ ಬುಧವಾರ ಸಂಜೆ ತಿಂಗಳಾಡಿಯ ಅಂಗಡಿಗೆ ತೆರಳಿ ಸಿಹಿತಿಂಡಿ ಖರೀದಿಸಿಹಣ ನೀಡುತ್ತಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ, ಸರ್ವೆ ಗ್ರಾಮದ ಸೊರಕೆ ನಿವಾಸಿ ಬದ್ರುದ್ದೀನ್ ಯಾನೆ ಬದ್ರು ಎಂಬಾತ ಏಕಾಏಕಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದಾನೆ. ಮಹಿಳೆ ಬೊಬ್ಬೆಹಾಕಿದಾಗ ಆತ ಅಂಗಡಿಯಿಂದ ಪರಾರಿಯಾಗಿದ್ದ.
ಪ್ರಕರಣ ದಾಖಲಿಸಿಕೊಂಡ ಸಂಪ್ಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಕೋರ್ಟ್ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net