ಫೇಸ್​ಬುಕ್ ಗೆಳೆಯನಿಂದ ರೇಪ್

rape
Published on

ಬೆಂಗಳೂರು: ಫೇಸ್​ಬುಕ್​ನಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಪ್ರೀತಿಸುವ ಸೋಗಿನಲ್ಲಿ 31 ವರ್ಷದ ಮಹಿಳೆಯನ್ನು ಪಾರ್ಟಿಗೆಂದು ಕರೆದೊಯ್ದು ಮದ್ಯ ಕುಡಿಸಿ ಅತ್ಯಾಚಾರ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬನಶಂಕರಿಯ ಶ್ರೀನಿವಾಸ ನಗರದ ಮಹಿಳೆ ಕೊಟ್ಟ ದೂರಿನ ಮೇರೆಗೆ ವಾಸಿಂ ಪಾಷಾ (31) ಎಂಬಾತನ ವಿರುದ್ಧ ಕೊಡಿಗೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಂತ್ರಸ್ತೆಗೆ 2011ರಲ್ಲಿ ಫೇಸ್​ಬುಕ್​ನಲ್ಲಿ ವಾಸಿಂ ಪರಿಚಯವಾಗಿದ್ದ. ಪ್ರತಿದಿನ ಚಾಟಿಂಗ್ ಮಾಡುತ್ತಿದ್ದರು. ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ತಿರುಗಿತ್ತು. ಸ್ನೇಹಿತರ ಮನೆಯಲ್ಲಿ ಆಯೋಜಿಸಿದ್ದ ಪಾರ್ಟಿಗೆ ಕರೆದೊಯ್ದು, ಒತ್ತಾಯಪೂರ್ವಕವಾಗಿ ಮದ್ಯ ಕುಡಿಸಿದ್ದ. ಅರೆ ಪ್ರಜ್ಞಾವಸ್ಥೆಯಲ್ಲಿ ಇದ್ದಾಗ ಅತ್ಯಾಚಾರ ಎಸಗಿದ್ದಾನೆ.

ಪ್ರಶ್ನಿಸಿದಾಗ ಮದುವೆಯಾಗುವುದಾಗಿ ಭರವಸೆ ನೀಡಿದ. ಇದಾದ ಬಳಿಕವೂ ಲಾಡ್ಜ್ ಗಳಿಗೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಖರ್ಚಿಗೆ ಹಣವಿಲ್ಲವೆಂದು 30 ಸಾವಿರ ರೂ. ಪಡೆದಿದ್ದ. ಇತ್ತೀಚೆಗೆ ಮದುವೆ ವಿಷಯ ಪ್ರಸ್ತಾಪಿಸಿದ್ದಕ್ಕೆ ಹಲ್ಲೆ ನಡೆಸಿದ್ದಲ್ಲದೆ ಧರ್ಮ ಬಿಟ್ಟು ಮದುವೆಯಾಗುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದಾನೆ ಎಂದು ದೂರಿನಲ್ಲಿ ಸಂತ್ರಸ್ತೆ ವಿವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net