ಸ್ಟಾರ್ ನಟನ ತೋಟದಲ್ಲಿ ಅಪ್ರಾಪ್ತ ವಯಸ್ಸಿನವಳ ಮೇಲೆ ಅತ್ಯಾಚಾರ; ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ..

rape
Published on

ಮೈಸೂರು: ಕನ್ನಡ ಚಿತ್ರರಂಗದ ಸ್ಟಾರ್​ ನಟನ ತೋಟದಲ್ಲಿ ಅಪ್ರಾಪ್ತ ವಯಸ್ಸಿನವಳ ಮೇಲೆ ಅತ್ಯಾಚಾರ ನಡೆದಿದ್ದು, ಆರೋಪಿ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮೈಸೂರಿನ ತಿ.ನರಸೀಪುರ ರಸ್ತೆಯಲ್ಲಿರುವ ತೋಟದಲ್ಲಿ ಈ ಅತ್ಯಾಚಾರ ಪ್ರಕರಣ ನಡೆದಿದೆ. ಸಂತ್ರಸ್ತೆಯ ಕುಟುಂಬ ತೋಟದಲ್ಲೇ ವಾಸವಿದೆ. ಅದೇ ತೋಟದಲ್ಲಿ ಪ್ರಾಣಿಗಳನ್ನು ನೋಡಿಕೊಳ್ಳುತ್ತಿದ್ದ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪೋಕ್ಸೊ ಕಾಯ್ದೆ ಪ್ರಕಾರ ಸ್ಥಳದ ಮಾಹಿತಿ ಸೇರಿ ಎಲ್ಲ ವಿವರವನ್ನು ಗೌಪ್ಯವಾಗಿ ಇಡಲಾಗಿದೆ. ಪೊಲೀಸರಿಂದ ತನಿಖೆ ಮುಂದುವರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net