ಬಾಲಕನಿಂದ ಮಗುವಿನ ಮೇಲೆ ಅತ್ಯಾಚಾರ

Child Rape
Published on

ಎಚ್.ಡಿ.ಕೋಟೆ; ಹದಿನಾರು ವರ್ಷದ ಬಾಲಕ ಐದು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಮಾಡಿರುವುದು ಬೆಳಕಿಗೆ ಬಂದಿದೆ.

ಮಂಗಳವಾರ ಬಾಲಕ ಪಕ್ಕದ ಮನೆಗೆ ಮೊಬೈಲ್ ಚಾರ್ಜರ್ ಕೇಳುವ ನೆಪದಲ್ಲಿ ಹೋಗಿದ್ದಾನೆ. ಮಗುವಿನ ತಾಯಿ ಹೊರಗೆ ಹೋಗಿದ್ದ ಸಂದರ್ಭ ನೋಡಿ ಐದು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಮಾಡಿದ್ದಾನೆ. ಮಗುವಿನ ತಾಯಿ ಮನೆಗೆ ಬಂದಾಗ ಬಾಲಕ ಮನೆಯಿಂದ ಹೊರಗೆ ಓಡಿದ್ದಾನೆ. ನೋವಿನಿಂದ ನರಳಾಡುತ್ತಿದ್ದ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಗೆ ಒಳಪಡಿಸಿದಾಗ ಅತ್ಯಾಚಾರ ನಡೆಸಿರುವುದು ಗೊತ್ತಾಗಿದೆ.

ಮಗುವಿನ ತಾಯಿ ಅಂತರಸಂತೆ ಪೊಲೀಸ್ ಠಾಣಿಗೆ ದೂರು ನೀಡಿದ್ದು, ಸಬ್ ಇನ್‌ಸ್ಪೆಕ್ಟರ್ ಚಂದ್ರಾಸನ್ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಾಡಿದ್ದಾರೆ. ಬಾಲಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ನಂತರ ಆತನನ್ನು ಮೈಸೂರಿನ ಬಾಲಮಂದಿರಕ್ಕೆ ಸೇರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net