ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Published on

ನೆಲಮಂಗಲ: ಹದಿಮೂರು ವರ್ಷದ ವಿದ್ಯಾರ್ಥಿನಿ ಮೇಲೆ ಆಟೋ ಚಾಲಕ ಅತ್ಯಾಚಾರ ಎಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ತಾಲೂಕು ವ್ಯಾಪ್ತಿಯ ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಪಾಲಕರಿಗೆ ತಿಳಿಸಿದ್ದು, ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದಾದ ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಬಾಲಕಿಯನ್ನು ವಿಚಾರಿಸಿದಾಗ ಆಟೋ ಚಾಲಕ ದೀಪಕ್ (23) ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿಸಿದ್ದು, ಪಾಲಕರು ನೀಡಿದ ದೂರಿನ ಮೇರೆಗೆ ಪೊಲೀಸರು ದೀಪಕ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕೊಲ್ಲುವುದಾಗಿ ಬೆದರಿಕೆ: ಮನೆಯಲ್ಲಿ ಪಾಲಕರು ಇಲ್ಲದಿರುವಾಗ ಮನೆಗೆ ಬರುತ್ತಿದ್ದ ದೀಪಕ್ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿದ್ದಾನೆ. ಕೃತ್ಯದ ಬಗ್ಗೆ ಪಾಲಕರಿಗೆ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂಬುದು ತನಿಖೆ ವೇಳೆ ಬಯಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net