ಶಿಕ್ಷಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Child Rape New
Published on

ಹಾವೇರಿ: ಗಣಿತದ ಪಾಠ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನೋರ್ವ ಅತ್ಯಾಚಾರ ನಡೆಸಿದ್ದು, ವಿದ್ಯಾರ್ಥಿನಿ ಈಗ ನಾಲ್ಕು ತಿಂಗಳ ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದಿದೆ.

ನಗರದ ವಿಶ್ವೇಶ್ವರಯ್ಯ ಶಾಲೆಯಲ್ಲಿ ಗಣಿತ ಶಿಕ್ಷಕನಾಗಿದ್ದ ಶಿಗ್ಗಾಂವಿ ತಾಲೂಕು ಅಂದಲಗಿ ಗ್ರಾಮದ ನಿವಾಸಿ ಪ್ರವೀಣಕುಮಾರ ಚನ್ನಬಸಪ್ಪ ಮರಿಯಣ್ಣನವರ ಅತ್ಯಾಚಾರ ಎಸಗಿದ ಆರೋಪಿ.

ಶಾಲೆಯಲ್ಲಿ ಗಣಿತ ಶಿಕ್ಷಕನಾಗಿದ್ದ ಪ್ರವೀಣಕುಮಾರ, ಅದೇ ಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಓದುತ್ತಿದ್ದ ಬಾಲಕಿಯೊಂದಿಗೆ ಸಲುಗೆಯಿಂದ ನಡೆದುಕೊಳ್ಳುತ್ತಿದ್ದ ಎನ್ನಲಾಗಿದೆ. ಪ್ರೀತಿಸುವುದಾಗಿ ನಂಬಿಸಿ ಜನವರಿಯಲ್ಲಿ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಹೋಗಿ ಒತ್ತಾಯದಿಂದ 2 ಬಾರಿ ಅತ್ಯಾಚಾರ ನಡೆಸಿದ್ದಾನೆ. ಜೂನ್ 25ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಈಗ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾಳೆ. ಜೂ. 17ರಂದು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಾದ ಸಮಯದಲ್ಲಿ ಗರ್ಭಿಣಿಯಾಗಿರುವ ವಿಷಯ ತಿಳಿದುಬಂದಿದೆ. ಈ ಕುರಿತು ಹಾವೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net