

ರೋಣ: ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2022ರಲ್ಲಿ 17 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮಣ ಕೊರವರ ಎಂಬಾತನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ. ಲಕ್ಷ್ಮಣ ಬಾಲಕಿಯನ್ನು ಫುಸಲಾಯಿಸಿ ಅತ್ಯಾಚಾರ ಎಸಗಿ, ಮನೆಯೊಂದರಲ್ಲಿ ಬಂಧನದಲ್ಲಿಟ್ಟು ಪದೇಪದೆ ದೈಹಿಕ ಸಂಪರ್ಕ ಬೆಳೆಸಿದ್ದ. ಈ ಕುರಿತು ರೋಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ್ದ ಅಂದಿನ ರೋಣ ಸಿಪಿಐ ಶಿವಾನಂದ ವಾಲಿಕಾರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜಕರಾದ ಉಮಾಪತಿ ಹಿರೇಮಠ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ ಜೈಲು ಶಿಕ್ಷೆ ಹಾಗೂ 56 ಸಾವಿರ ರೂ. ದಂಡ ವಿಧಿಸಿದ್ದಾರೆ.