ಕೊಪ್ಪಳ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಬಸವರಾಜ ಮುದ್ಲಾಪು ಎಂಬಾತನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 20 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಯಾಲ ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೊ) ತೀರ್ಪು ನೀಡಿದೆ.
ಬಸವರಾಜ ಕುಕನೂರು ತಾಲೂಕಿನ ಗ್ರಾಮವೊಂದರ ಅಪ್ರಾಪ್ತಳನ್ನು ಅಪಹರಿಸಿಕೊಂಡು ಹೋಗಿ ಗ್ರಾಮದ ಪಾಳು ಮನೆಯಲ್ಲಿ ಅತ್ಯಾಚಾರ ಎಸಗಿದ್ದ. ಈ ಕುರಿತು ಕುಕನೂರು ಠಾಣೆಯಲ್ಲಿ 2022ರ ಮಾರ್ಚ್ 20ರಂದು ಪ್ರಕರಣ ದಾಖಲಾಗಿದೆ. ಸಿಪಿಐ ಎಂ.ನಾಗರೆಡ್ಡಿ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಶಿೆ ವಿಧಿಸಿದೆ. ಅಪರಾಧಿ ಬಸವರಾಜನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶ ಕುಮಾರ ಡಿ.ಕೆ. ಅವರು 2024ರ ಜುಲೈ 30ರಂದು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು.