

ಮಂಗಳೂರು: ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) 2020-21ನೇ ಸಾಲಿನ ರಾಷ್ಟ್ರ ಮಟ್ಟದ ಅತ್ಯುತ್ತಮ ಸ್ವಯಂ ಸೇವಕಿ ಪ್ರಶಸ್ತಿಗೆ ಸುರತ್ಕಲ್ ಗೋವಿಂದದಾಸ್ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿನಿ ರಶ್ಮೀ ಜೆ. ಅಂಚನ್ ಆಯ್ಕೆಯಾಗಿದ್ದಾರೆ. ಇವರು ಇತ್ತೀಚೆಗೆ ರಾಜ್ಯ ಮಟ್ಟದ ಅತ್ಯುತ್ತಮ ಸ್ವಯಂ ಸೇವಕಿ ಪ್ರಶಸ್ತಿಯನ್ನೂ ಪಡೆದಿದ್ದಾರೆ.
ಎನ್‌ಎಸ್‌ಎಸ್ ಸ್ವಯಂಸೇವಕಿಯಾಗಿ ಕೆಲಸ ಮಾಡುವಲ್ಲಿ ಪಟ್ಟ ಶ್ರಮ, ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಬೇಕೆಂಬ ತುಡಿತ ಹಾಗೂ ಇವೆಲ್ಲವನ್ನೂ ಸೇರಿಸಿ ಮಾಡಿದ ಕಠಿಣ ಪರಿಶ್ರಮದಿಂದ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆಯಲು ಸಾಧ್ಯವಾಯಿತು. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಎರಡೂ ಪ್ರಶಸ್ತಿ ಬಂದಿರುವುದು ಸಂತೋಷ ಉಂಟು ಮಾಡಿದೆ ಎಂದವರು ಪ್ರತಿಕ್ರಿಯಿಸಿದ್ದಾರೆ.