

ಮಂಡ್ಯ: ಜಿಲ್ಲಾ ಯುವ ಬರಹಗಾರರ ಬಳಗದ ಸಂಸ್ಥಾಪಕ ಅಧ್ಯಕ್ಷ ಮಂಗಲ ಟಿ.ಸತೀಶ್ ಜವರೇಗೌಡ ಅವರಿಗೆ ಬೆಂಗಳೂರಿನ ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಮತ್ತು ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡುವ ರಾಜ್ಯಮಟ್ಟದ ’ರಾಷ್ಟ್ರಪಿತ ಮಹಾತ್ಮಗಾಂಧಿ ಸದ್ಭಾವನಾ ಪ್ರಶಸ್ತಿ’ ದೊರೆತಿದೆ.
ಸಾಂಸ್ಕೃತಿಕ ಸಂಘಟನೆ, ಸೃಜನಶೀಲ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಟಿ.ಸತೀಶ್ ಜವರೇಗೌಡ ಸಲ್ಲಿಸಿರುವ ಸೇವೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆ.21ರಂದು ಮಧ್ಯಾಹ್ನ 2 ಗಂಟೆಗೆ ಮೈಸೂರಿನ ವಿಜಯನಗರದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಗುಣವಂತ ಮಂಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.