ರಾಷ್ಟ್ರೀಯಲೋಕ ಅದಾಲತ್ ಜುಲೈ 13ರಂದು

web 66
Published on

ಧಾರವಾಡ: ಜಿಲ್ಲೆಯ ಕಕ್ಷಿದಾರರು ಜು. 20ರಿಂದ ಆ. 3ರವರೆಗೆ ನಡೆಯುವ ವಿಶೇಷ ಜನತಾ ನ್ಯಾಯಾಲಯದಲ್ಲಿ ವಿಡಿಯೋ ಕಾನರೆನ್ಸ್ ಮೂಲಕ ಹಾಜರಾಗಿ ಸರ್ವೋಚ್ಛ ನ್ಯಾಯಾಲಯದಲ್ಲಿರುವ ತಮ್ಮ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅದೇರೀತಿ ಜು. 13ರಂದು ಜಿಲ್ಲೆಯಲ್ಲಿ ರಾಷ್ಟಿçÃಯ ಲೋಕ ಅದಾಲತ್ ಆಯೋಜನೆ ಮಾಡಲಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾದೀಶೆ ಕೆ.ಜಿ. ಶಾಂತಿ ಹೇಳಿದರು.
ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ 10,704 ಪ್ರಕರಣಗಳನ್ನು ರಾಜಿ ಮಾಡಿಸಲು ಗುರುತಿಸಲಾಗಿದೆ. ಸಿವಿಲ್ ದಾವೆಗಳು, ಚೆಕ್ ಬೌನ್ಸ್ ಪ್ರಕರಣಗಳು, ವಿವಾಹ ವಿಚ್ಛೇದನ ಹೊರತುಪಡಿಸಿ ಕೌಟುಂಬಿಕ ಪ್ರಕರಣಗಳು, ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು, ಎಲ್‌ಎಸಿ ಪ್ರಕರಣ, ಅಪಘಾತ ಪರಿಹಾರ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ನ್ಯಾ ಕೆ.ಜಿ. ಶಾಂತಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net