ರಾಷ್ಟ್ರೀಯ ಲೋಕ ಆದಾಲತ್ 8ರಂದು

web 66
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಮಾ. 8ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಸಿವಿಲ್ ವ್ಯಾಜ್ಯ, ಮೋಟರ್ ವಾಹನ ಅಪಘಾತ ಪರಿಹಾರ, ಭೂಸ್ವಾಧೀನ ಪ್ರಕರಣ, ವಿದ್ಯುತ್ ಮಂಡಳಿ ಮುಂತಾದ ಸ್ಥಳೀಯ ಸಂಸ್ಥೆಗಳ ಪ್ರಕರಣಗಳು, ಬ್ಯಾಂಕ್, ಸಹಕಾರಿ ಸಂಘ, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳು, ವಿದ್ಯುಚ್ಛಕ್ತಿ ಮತ್ತು ನೀರಿನ ಶುಲ್ಕ ಪಾವತಿ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಎಫ್. ದೊಡ್ಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net