

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಽಕಾರದ ಆದೇಶದ ಮೇರೆಗೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಡಿ. 14ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ರಾಷ್ಟ್ರೀಯ ಲೋಕ ಆದಾಲತ್ ಆಯೋಜಿಸಲಾಗುವುದು.
ಲೋಕ ಅದಾಲತ್‌ದಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಸಿವಿಲ್ ವ್ಯಾಜ್ಯ, ಮೋಟಾರ್ ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವಿದ್ಯುತ್ ಮಂಡಳಿ, ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣಗಳು, ಬ್ಯಾಂಕ್, ಸಹಕಾರಿ ಸಂಘ, ಖಾಸಗಿ ವ್ಯಕ್ತಿಗಳ ನಡುವಿನ ಚೆಕ್ ಅಮಾನ್ಯ, ಹಣ ವಸೂಲಾತಿ ಪ್ರಕರಣಗಳಿಗೆ ಸಂಬ೦ಧಿಸಿದ ವ್ಯಾಜ್ಯಗಳು, ಜೀವನಾಂಶ, ವೈವಾಹಿಕ ಪ್ರಕರಣಗಳು, (ವಿಚ್ಛೇದನ ಹೊರತುಪಡಿಸಿ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳು, ವಿದ್ಯುಚ್ಛಕ್ತಿ ಮತ್ತು ನೀರಿನ ಶುಲ್ಕ ಪಾವತಿ ಪ್ರಕರಣಗಳು, ಸಾರ್ವಜನಿಕ ಸೇವೆ ಮತ್ತು ನಿವೃತ್ತಿ ವೇತನಗಳಿಗೆ ಸಂಬ೦ಧಿಸಿದ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ವಿಶೇಷವಾಗಿ ಕಕ್ಷಿದಾರರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಎಫ್. ದೊಡ್ಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.