

ಮಂಗಳೂರು: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು ಅದರಲ್ಲಿ 14,840 ಪ್ರಕರಣಗಳು ರಾಜಿಯಲ್ಲಿ ಇತ್ಯರ್ಥಗೊಳಿಸಲಾಗಿದ್ದು, ರಾಜಿ ಸಂದರ್ಭ ಒಟ್ಟು ಮೊತ್ತ 17,97,64,778 ರೂ. ಪರಿಹಾರ ಹಣ ವಸೂಲಿ ಮಾಡಲಾಗಿದೆ.
ಅದಾಲತ್‌ನಲ್ಲಿ ನಡೆಸಿದ ಒಟ್ಟು 48 ಬೈಠಕ್‌ಗಳಲ್ಲಿ ಒಟ್ಟು 21,763 ಪ್ರಕರಣಗಳನ್ನು ಪರಿಗಣಿಸಲಾಗಿತ್ತು. ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ನ್ಯಾಯಾಧೀಶರಾದ ರವೀಂದ್ರ ಎಂ. ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ. ಅವರು ತಿಳಿಸಿದ್ದಾರೆ.
ಈ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.
ಈ ಅದಾಲತ್‌ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯಗಳು/ಪ್ರಕರಣಗಳನ್ನು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೇ ಇತ್ಯರ್ಥಗೊಳಿಸಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳು ಉಪಸ್ಥಿತರಿದ್ದರು.