

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ತಾಲೂಕು ಮಟ್ಟದ ಕಚೇರಿಯಲ್ಲಿ ಬೆಂಗಳೂರು ಕೇಂದ್ರ ಯೋಜನೆಯ ತಾಲೂಕು ಕಾರ್ಯಕ್ರಮ ಸಂಯೋಜಕರು- 1 ಹುದ್ದೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು 21ರಿಂದ 45 ವರ್ಷ ವಯೋಮಿತಿ ಹೊಂದಿದ್ದು, ಪದವಿ ವಿದ್ಯಾರ್ಹತೆ ಹೊಂದಿದ್ದು, ತಂತ್ರಜ್ಞಾನ ಮತ್ತು ಸ್‌ಟಾವೇರ್ ಅಪ್ಲಿಕೇಶನ್‌ನಲ್ಲಿ ಕನಿಷ್ಠ 2 ವರ್ಷಗಳ ಉದ್ಯೋಗ ಅನುಭವ ಇರಬೇಕು. ಜೂ. 16ರೊಳಗೆ ಅರ್ಜಿ ಸಲ್ಲಿಸಬೇಕು. ವಿಳಾಸ: ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ.ಎಚ್. ಮರಿಗೌಡ ರಸ್ತೆ, ಬೆಂಗಳೂರು ನಗರ ಜಿಲ್ಲೆ- 29. ವಿವರಕ್ಕೆ ದೂ: 080- 2957 8688 ಸಂಪರ್ಕಿಸಿ.