ಭಾರತ ವಿಶ್ವಗುರುವಾಗಲು ಕೊಡುಗೆ ನೀಡಿ

23 Dwd 8
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಷ್ಟ್ರೋತ್ಥಾನ ವಿದ್ಯಾಲಯಕ್ಕೆ ಸುತ್ತಲಿನ 16 ಹಳ್ಳಿಗಳ ಮಕ್ಕಳು ಕಲಿಯಲು ಬರುತ್ತಿದ್ದಾರೆ. ಈ ಶಾಲೆಯಲ್ಲಿ ಕಲಿತ ಮಕ್ಕಳು ದೇಶದ ಉನ್ನತ ವ್ಯಕ್ತಿಗಳಾಗಿ ಹೊರಹೊಮ್ಮಬೇಕು. ಭಾರತವನ್ನು ವಿಶ್ವಗುರುವನ್ನಾಗಿ ಮಾಡಲು ಕೊಡುಗೆ ನೀಡಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೆಂಡೆ ಹೇಳಿದರು.

ತಾಲೂಕಿನ ಮುಮ್ಮಿಗಟ್ಟಿಯ ರಾಷ್ಟ್ರೋತ್ಥಾನ ವಿದ್ಯಾಲಯದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾಲಯದ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭದ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ದೇವರಹುಬ್ಬಳ್ಳಿಯ ಸಿದ್ಧಾರೂಢ ಆಶ್ರಮದ ಶ್ರೀ ಸಿದ್ಧಶಿವಯೋಗಿ ಸ್ವಾಮೀಜಿ ಮಾತನಾಡಿ, ತಂದೆ- ತಾಯಿ ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು. ಇದರಿಂದ ಮಕ್ಕಳ ಜೀವನ ಅಭಿಮಾನ ಪಡುವಂತಾಗುತ್ತದೆ. ತಂದೆ- ತಾಯಿಗೆ ಹೆಮ್ಮೆ ತರುವ ಮಕ್ಕಳು ಸಮಾಜದ ಬೆಳಕಾಗುತ್ತಾರೆ ಎಂದರು.

ಶಾಲೆಯ ಅಧ್ಯಕ್ಷ ಡಾ. ಎಸ್.ಆರ್. ರಾಮನಗೌಡರ, ರಾಷ್ಟ್ರೋತ್ಥಾನ ಪರಿಷತ್‌ನ ನಾ. ದಿನೇಶ ಹೆಗಡೆ, ಒಎನ್‌ಜಿಸಿ ಗೋವಾ ಚೀಫ್ ಮ್ಯಾನೇಜರ್ ಅಮಿತ್ ರಂಜನ್ ಮಿಶ್ರಾ, ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಾಘವೇಂದ್ರ ಅಂಬೇಕರ ಸ್ವಾಗತಿಸಿದರು. ವಿನಾಯಕ ಭಟ್ ನಿರೂಪಿಸಿದರು. ಮಹಾಂತೇಶ ಮಠಪತಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net