

ಮೈಸೂರು: ಮೆಸೂರು ಯೋಗ ಒಕ್ಕೂಟವು ತನ್ನ 24ನೇ ವಾರ್ಷಿಕೋತ್ಸವ ಹಾಗೂ ರಥಸಪ್ತಮಿ ಅಂಗವಾಗಿ ಅರಮನೆ ಉತ್ತರ ದ್ವಾರದಲ್ಲಿ ಮಂಗಳವಾರ ಆಯೋಜಿಸಿದ್ದ ಸಾಮೂಹಿಕ 108 ಸೂರ್ಯ ನಮಸ್ಕಾರದಲ್ಲಿ ನೂರಾರು ಯೋಗಪಟುಗಳು ಭಾಗಿಯಾಗಿದ್ದರು.
ಒಕ್ಕೂಟದ ಅಧ್ಯಕ್ಷ ಕೆ.ಜಿ. ದೇವರಾಜು ಮಾತನಾಡಿ, ಒಕ್ಕೂಟವು 2001ರಲ್ಲಿ ಪ್ರಾರಂಭವಾಗಿದ್ದು, ಅನೇಕ ಯೋಗ ಮತ್ತು ಆರೋಗ್ಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಪ್ರತಿವರ್ಷ ರಥಸಪ್ತಮಿ ಅಂಗವಾಗಿ ಅರಮನೆ ಉತ್ತರ ದ್ವಾರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ 108 ಸೂರ್ಯ ನಮಸ್ಕಾರಗಳು ಹಾಗೂ ಸೂರ್ಯಯಜ್ಞ ಧಾರ್ಮಿಕ ಕಾರ್ಯಕ್ರಮ ನಡೆಸುತ್ತಿದೆ ಎಂದರು.
ಈವರೆಗೆ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ, ಭಗವದ್ಗೀತೆ ಕಂಠಪಾಠ ಸ್ಪರ್ಧೆ, ಯೋಗ ಚಿತ್ರಕಲಾ ಸ್ಪರ್ಧೆ, ಜನಮಾನ್ಯರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಸರ್ಕಾರಿ ಆಯುರ್ವೇದ ಹಾಗೂ ಜೆಎಸ್‌ಎಸ್ ಆಯುರ್ವೇದ ಕಾಲೇಜಿನ ಸಹಯೋಗದಲ್ಲಿ ಆರೋಗ್ಯ ಸಪ್ತಾಹ, ಯೋಗ ಕಾರ್ಯಾಗಾರ ನಡೆಸಲಾಗುತ್ತಿದೆ ಎಂದು ಹೇಳಿದರು.
ಸಮಾಜ ಸೇವಕ ಕೆ. ರಘುರಾಂ ಮಾತನಾಡಿ, ಮೈಸೂರಿನಲ್ಲಿ ಯೋಗ ಬೆಳವಣಿಗೆಗೆ ಯದುವಂಶದ ಕೊಡುಗೆ ಅಪಾರ. ಅದೇ ರೀತಿ ಹಲವಾರು ಸಾಧಕರು ಯೋಗವನ್ನು ವಿಶ್ವಮಟ್ಟದಲ್ಲಿ ಪ್ರಸಿದ್ಧಿಯಾಗಲು ಕಾರಣರಾಗಿದ್ದಾರೆ ಎಂದರು.
ಈ ಸಂದರ್ಭ ಸಮಾಜ ಸೇವಕ ಕೆ. ರಘುರಾಂ, ಒಕ್ಕೂಟದ ಮಾಜಿ ಅಧ್ಯಕ್ಷ ಎಸ್.ವಿ. ವೆಂಕಟೇಶಯ್ಯ, ಸ್ವಾಸ್ಥ್ಯ ಮತ್ತು ಆಹಾರ ತಜ್ಞೆ ನಂದಿನಿ ಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಒಕ್ಕೂಟದ ಗೌರವಾಧ್ಯಕ್ಷ ಡಾ.ಎ.ಎಸ್. ಚಂದ್ರಶೇಖರ್‌ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಒಕ್ಕೂಟದ ಗೌರವಾಧ್ಯಕ್ಷ ಟಿ. ಜಲೇಂದ್ರಕುಮಾರ್, ಕಾರ್ಯಾಧ್ಯಕ್ಷ ಡಾ.ಬಿ.ಪಿ. ಮೂರ್ತಿ, ಶಾಂತರಾಮ್, ಎಂ.ಎಸ್. ಶಿವಪ್ರಕಾಶ್, ಉಪಾಧ್ಯಕ್ಷರಾದ ಎಂ.ಎಸ್. ರಮೇಶ್‌ಕುಮಾರ್, ಆಶಾದೇವಿ, ಪ್ರಧಾನ ಕಾರ್ಯದರ್ಶಿ ಯೋಗ ಕುಮಾರ್, ಖಜಾಂಚಿ ನರಸಿಂಹ ಹಾಗೂ ಇತರರು ಪಾಲ್ಗೊಂಡಿದ್ದರು.