149 ಕ್ವಿಂಟಾಲ್ ಪಡಿತರ ಅಕ್ಕಿ ವಶ

CTD CLK PADITARA 18
Published on

ಚಳ್ಳಕೆರೆ: ಮೊಳಕಾಲ್ಮೂರಿನಿಂದ ತುಮಕೂರು ಕಡೆ ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ 149 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ತಹಸೀಲ್ದಾರ್ ಎನ್. ರಘುಮೂರ್ತಿ ಭಾನುವಾರ ನಗರದಲ್ಲಿ ವಶಪಡಿಸಿಕೊಂಡಿದ್ದಾರೆ.

ಆರಂಭದಲ್ಲಿ ಲಾರಿಯಲ್ಲಿರುವುದು ಮೆಕ್ಕೆಜೋಳ ಎಂದು ತಹಸೀಲ್ದಾರ್ ಜತೆ ಚಾಲಕ ವಾದ ಮಾಡಿದ್ದಾನೆ. ಪರಿಶೀಲನೆ ಬಳಿಕ ದಾಖಲೆ ಇಲ್ಲದೆ ಪಡಿತರ ಅಕ್ಕಿ ಸಾಗಿಸುತ್ತಿರುವ ಮಾಹಿತಿ ತಿಳಿದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಆಹಾರ ನಿರೀಕ್ಷಕ ಶ್ರೀನಿವಾಸ್, ಗ್ರಾಮ ಲೆಕ್ಕಾಧಿಕಾರಿ ಪ್ರಕಾಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net