

ತಾಳಿಕೋಟೆ : ಪಟ್ಟಣದ ವಿರಕ್ತೇಶ್ವರ ಭರತನಾಟ್ಯ ತರಬೇತಿ ಸಂಸ್ಥೆ ವತಿಯಿಂದ ಕೊಡಮಾಡುವ ಚಿತ್ರಕಲಾ ರತ್ನ ಸಿರಿ ಪ್ರಶಸ್ತಿಗೆ ತಾಲೂಕಿನ ಗೊಟಗುಣಕಿ ಗ್ರಾಮದ ರಾಚಯ್ಯ ರುದ್ರಸ್ವಾಮಿ ಹಿರೇಮಠ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ವಿನೋದಕುಮಾರ ಚಿಕ್ಕಮಠ ತಿಳಿಸಿದ್ದಾರೆ. ಮೇ 3 ರಂದು ಪಟ್ಟಣದ ವಿಠ್ಠಲ ಮಂದಿರದ ಸಭಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಅವರು ತಿಳಿಸಿದ್ದಾರೆ.