ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳ ಹೆಚ್ಚಳ : ಡಾ.ಪ್ರಸನ್ನ ಕುಮಾರ್ ಐತಾಳ್ ಸಲಹೆ

New Project (8)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ವಿದ್ಯಾರ್ಥಿ ದಿಸೆಯಲ್ಲಿ ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿಕೊಳ್ಳುವಂತೆ ಮಾಡುವುದು ಪ್ರಸ್ತುತ ಕಾಲಘಟ್ಟದಲ್ಲಿ ಅಗತ್ಯ ಎಂದು ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಸಂಸ್ಕೃತ ಉಪನ್ಯಾಸಕ ಡಾ.ಪ್ರಸನ್ನ ಕುಮಾರ್ ಐತಾಳ್ ಹೇಳಿದರು.

ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ 8ನೇ ತರಗತಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಸ್‌ಡಿಎಂ ಡಿಎಡ್ ಕಾಲೇಜು ಉಪನ್ಯಾಸಕ ಮಂಜು ಆರ್. ಮಾತನಾಡಿದರು. ಬೆಳ್ತಂಗಡಿ ತಾಲೂಕಿನ ಆರೋಗ್ಯ ಕೇಂದ್ರದ ಹಿರಿಯ ಪರಿವೀಕ್ಷಕ ಸೋಮನಾಥ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ರತ್ನಮಾನಸ ವಿದ್ಯಾರ್ಥಿ ನಿಲಯದ ಪಾಲಕ ಯತಿಶ್ ಕೆ.ಬಳಂಜ ಅಧ್ಯಕ್ಷತೆ ವಹಿಸಿದ್ದರು. 10ನೇ ತರಗತಿ ವಿದ್ಯಾರ್ಥಿಗಳು 8ನೇ ತರಗತಿ ವಿದ್ಯಾರ್ಥಿಗಳನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಿ, ಆರತಿ ಬೆಳಗಿ ಹಣೆಗೆ ತಿಲಕ ಇಟ್ಟು ಬರಮಾಡಿಕೊಂಡರು. ನಿಲಯದ ಸಿಬ್ಬಂದಿ ದೀಪಕ್, ಉದಯಕುಮಾರ್ ಉಪಸ್ಥಿತರಿದ್ದರು. ಶಿಕ್ಷಕ ರವಿಚಂದ್ರ ಸ್ವಾಗತಿಸಿದರು. ಉದಯರಾಜ್ ವಂದಿಸಿದರು. ನಿಶಿತ್ ಕಾರ್ಯಕ್ರಮ ನಿರೂಪಿಸಿದರು.

ವ್ಯಕ್ತಿ ಸಮಾಜದಲ್ಲಿ ಉತ್ತಮ ಸ್ಥಾನದಲ್ಲಿರಬೇಕು. ಹಲವಾರು ಮಂದಿಗೆ ಉದ್ಯೋಗ ಕೊಡುವಂತಹ ಶಕ್ತಿಗಳಾಗಬೇಕು. ಅಂಕವೇ ಪ್ರಾಧಾನ್ಯತೆ ಅಲ್ಲ, ಉತ್ತಮ ನಡವಳಿಕೆ ಅಗತ್ಯ. ವಿ.ಕೆ.ವಿಟ್ಲ ಚಿತ್ರಕಲಾ ಶಿಕ್ಷಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net