ರತ್ನಮ್ಮ ಬಾಳೆ ಗ್ರಾಪಂ ಉಪಾಧ್ಯಕ್ಷೆ

bale
ಬಾಳೆ ಗ್ರಾಪಂ ಉಪಾಧ್ಯಕ್ಷೆ ರತ್ನಮ್ಮ ಅವರನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು. ಮಂಜಪ್ಪ, ರಘು, ಸುಧಾಕರ ಇತರರಿದ್ದರು.
Published on

ಎನ್.ಆರ್.ಪುರ: ಬಾಳೆ ಗ್ರಾಪಂ ಉಪಾಧ್ಯಕ್ಷರಾಗಿ ರತ್ನಮ್ಮ ಅವಿರೋಧವಾಗಿ ಆಯ್ಕೆಯಾದರು.

ರತ್ನಮ್ಮ ಇತ್ತೀಚೆಗೆ ನ್ಯಾಯಾಲಯದಲ್ಲಿ ಲಾಟರಿ ಮೂಲಕ ಸದಸ್ಯೆಯಾಗಿ ಆಯ್ಕೆಯಾಗಿದ್ದರು. ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿತ್ತು. ರತ್ನಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಚುನಾವಣಾಧಿಕಾರಿಯಾಗಿ ಬಿ.ವೀರಪ್ಪ ಕಾರ್ಯ ನಿರ್ವಹಿಸಿದರು. ಕಾಂಗ್ರೆಸ್ ಮುಖಂಡರಾದ ಮಂಜಪ್ಪ, ಬೆಣ್ಣೆಗುಂಡಿ ರಘು, ರತನ್, ಇ.ಐ.ಶಿವಕುಮಾರ್, ಸುಧಾಕರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net