ಬೈಕ್ ಡಿಕ್ಕಿಯಾಗಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಸಾವು

Crime Logo
Published on

ರಟ್ಟಿಹಳ್ಳಿ: ಬೈಕ್ ಡಿಕ್ಕಿಯಾಗಿ ಪಾದಚಾರಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ತೋಟಗಂಟಿ ಗ್ರಾಮದ ಬಳಿ ಭಾನುವಾರ ನಡೆದಿದೆ.
ಗ್ರಾಮದ ಭರಮಗೌಡ ನಿಂಗನಗೌಡ ದೊಡ್ಡಗೌಡ್ರ ಮೃತ ವ್ಯಕ್ತಿ.
ಇವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಬೈಕ್ ಸವಾರನೊಬ್ಬ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡು ಭರಮಗೌಡ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net