ಬೈಕ್‌ನಿಂದ ಬಿದ್ದು ಸವಾರ ಸಾವು

Crime Logo
Published on

ರಟ್ಟಿಹಳ್ಳಿ: ನಿಯಂತ್ರಣ ತಪ್ಪಿದ ಬೈಕ್ ಹಳ್ಳಕ್ಕೆ ಬಿದ್ದು ಸವಾರ ಮೃತಪಟ್ಟ ಘಟನೆ ತಾಲೂಕಿನ ಸಂಕವ್ವನ ಹಳ್ಳದ ಬಳಿ ನಡೆದಿದೆ.
ತಾಲೂಕಿನ ಮಕರಿ ಗ್ರಾಮದ ಮಲ್ಲಪ್ಪ ಭರಮಪ್ಪ ಕುಪ್ಪೇಲೂರ (೪೦) ಮೃತ ಬೈಕ್ ಸವಾರ.
ಈತ ಪಡಿತರ ತರುವ ಸಲುವಾಗಿ ಗ್ರಾಮದಿಂದ ರಟ್ಟಿಹಳ್ಳಿಗೆ ತೆರಳುತ್ತಿದ್ದ ಸಮಯದಲ್ಲಿ ದಾರಿ ಮಧ್ಯೆ ಬೈಕ್ ನಿಯಂತ್ರಣ ತಪ್ಪಿ ಹಳ್ಳದ ಬದಿ ಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net