ಕಾರು ಡಿಕ್ಕಿ ಬೈಕ್ ಸವಾರ ಸಾವು

Published on

ರಟ್ಟಿಹಳ್ಳಿ: ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ತಾಲೂಕಿನ ಬಡಾಸಂಗಾಪುರ ಕ್ರಾಸ್ ಬಳಿ ಮಂಗಳವಾರ ಸಂಭವಿಸಿದೆ.
ರಾಣೆಬೆನ್ನೂರ ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ ಮಹಬೂಬಸಾಬ ಮರ್ದಾನಸಾಬ ಹಲಗೇರಿ (70) ಮೃತ ಬೈಕ್ ಸವಾರ.
ಈತ ತುಮ್ಮಿನಕಟ್ಟಿ ಗ್ರಾಮದಿಂದ ರಟ್ಟಿಹಳ್ಳಿ ಕಡೆಗೆ ತೆರಳುತ್ತಿದ್ದ. ಈ ಸಮಯದಲ್ಲಿ ಕಾರು ಚಾಲಕ ಹಿಂಬದಿಯಿಂದ ಡಿಕ್ಕಿ ಪಡಿಸಿದ್ದರಿಂದ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net