ಹಿಂದು ಕಾರ್ಯಕರ್ತರ ಬೈಕ್ ರ‌್ಯಾಲಿ ವೇಳೆ ಕಲ್ಲು ತೂರಾಟ

75a9dc32-df29-4cb3-9d3e-023638946be9
Published on

ಹಾವೇರಿ: ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಹಿಂದು ಕಾರ್ಯಕರ್ತರ ಬೈಕ್ ರ‌್ಯಾಲಿ ವೇಳೆ ಕಲ್ಲು ತೂರಾಟ ನಡೆದಿದೆ. ಇದರಿಂದ ಪಟ್ಟಣದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.
ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಹಿನ್ನೆಲೆಯಲ್ಲಿ ಪಟ್ಟಣದ ಕಾರಂಜಿ ವೃತ್ತದಲ್ಲಿ ಆಯೋಜಿಸಿದ್ದ ಬೈಕ್ ರ‌್ಯಾಲಿ ವೇಳೆ ಕಲ್ಲು ತೂರಾಟ ನಡೆದಿದೆ. ಕೆಲ ಪ್ರಾರ್ಥನಾ ಮಂದಿರ, ಅಂಗಡಿ, ಮನೆಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಆಟೋ, ಕಾರುಗಳ ಮೇಲೆ ಕಲ್ಲು ತೂರಲಾಗಿದೆ. ಇದರಿಂದ ಹಲವು ವಾಹನಗಳು ಜಖಂಗೊಂಡಿವೆ.
ಸ್ಥಳದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾ ಹೂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net