ಮೇಗಳಮನಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

RTL SANMAN
Published on

ರಟ್ಟಿಹಳ್ಳಿ: ಪಟ್ಟಣದ ಕುಮಾರೇಶ್ವರ ಪ್ರೌಢ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಕುಸುಮಾವತಿ ಮೇಗಳಮನಿ ಅವರಿಗೆ 2024-25ನೇ ಸಾಲಿನ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಶಿಕ್ಷಣ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸೂರ್ಯ ಫೌಂಡೇಷನ್, ಸ್ಪಾಕ್ ಅಕಾಡೆಮಿ ಬೆಂಗಳೂರು ಹಾಗೂ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಸಹಯೋಗದಲ್ಲಿ ಬೆಂಗಳೂರಿನ ಇಂಡೋ ಗ್ಲೋಬ್ ಕಾಲೇಜ್​ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿಕ್ಷಕಿ ಕುಸುಮಾವತಿಯವರು ಶಿಕ್ಷಣ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡುತ್ತ ಶಾಲಾಭಿವೃದ್ಧಿಗೆ ಶ್ರಮಿಸಿ, ಉತ್ತಮ ಸಾಧಕರಾಗಿ, ವಿಶಿಷ್ಟ ಶಿಕ್ಷಕರಾಗಿ ಸಲ್ಲಿಸುತ್ತಿರುವ ಇವರ ಸೇವೆ ಪರಿಗಣಿಸಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಪಿ. ಮಹೇಶ, ಇಂಡೋ ಗ್ಲೋಬ್ ಕಾಲೇಜ್ ಅಧ್ಯಕ್ಷ ಟಿ.ಎಂ. ಗೌಡ, ಕಾರ್ಯದರ್ಶಿ ಸಂಗೀತ ಸೂರ್ಯ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಸೋಮೇಶ ನವೋದಯ, ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net