ಸಹಕಾರಿ ಸಂಘಗಳು ರೈತರ ಅಭಿವೃದ್ಧಿಗೆ ಆದ್ಯತೆ ನೀಡಲಿ

rtl bc patil
Published on

ರಟ್ಟಿಹಳ್ಳಿ: ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳು ಸರ್ಕಾರದಿಂದ ರೈತರಿಗೆ ದೊರಕುವ ಸಾಲ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿವೆ. ಕೃಷಿ ಚಟವಟಿಕೆಯಲ್ಲಿ ನಿರತರಾಗಿರುವ ರೈತರಿಗೆ ಸಮರ್ಪಕ ಮಾಹಿತಿ ನೀಡಿ, ಸರ್ಕಾರದ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸಬೇಕಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಪಟ್ಟಣದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಮೇಲ್ಮಹಡಿ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಸುಮಾರು 80 ವರ್ಷಗಳಿಂದ ಇಲ್ಲಿನ ಪ್ರಾಥಮಿಕ ಸಹಕಾರ ಸಂಘ ರೈತರಿಗೆ ಸೌಲಭ್ಯಗಳನ್ನು ಸಮರ್ಪವಾಗಿ ತಲುಪಿಸುವ ಕೆಲಸ ಮಾಡುತ್ತಿದೆ ಎಂದರು.

ಮಾಜಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ಕೃಷಿ ಪ್ರಧಾನವಾದ ಈ ಕ್ಷೇತ್ರದಲ್ಲಿ ರೈತರಿಗೆ ಸರ್ಕಾರದಿಂದ ಎಲ್ಲ ಸೌಲಭ್ಯಗಳು ಸಮರ್ಪಕವಾಗಿ ತಲುಪಬೇಕು. ರೈತರು ಸಹಕಾರಿ ಸಂಘಗಳಲ್ಲಿ ಟ್ರ್ಯಾಕ್ಟರ್, ಕುರಿ ಸಾಕಾಣಿಕೆ, ಹೈನುಗಾರಿಗೆ ಸೇರಿದಂತೆ ಉಪಕಸುಬುಗಳಿಗೆ ಸಾಲಸೌಲಭ್ಯಗಳು ಕಡಿಮೆ ಬಡ್ಡಿ ದರದಲ್ಲಿ ದೊರಕುತ್ತವೆ. ಇವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ ಮಾತನಾಡಿ, ಸರ್ಕಾರಗಳು ಮೊದಲು ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಬೀಜ, ಗೊಬ್ಬರ, ಕೃಷಿ ಚಟುವಟಿಕೆಗೆ ಅವಶ್ಯವಿರುವ ಸಲಕರಣೆಗಳನ್ನು ಪೂರೈಸಬೇಕು. ಬೆಳೆಗಳ ಸಂರಕ್ಷಣೆಗೆ ಗೋದಾಮುಗಳನ್ನು ನಿರ್ವಿುಸಬೇಕು ಎಂದರು.

ಸಹಕಾರಿ ಸಂಘದ ಅಧ್ಯಕ್ಷ ದೊಡ್ಡಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಎಸ್. ಪಾಟೀಲ, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಲಿಂಗರಾಜ ಚಪ್ಪರದಹಳ್ಳಿ, ರವಿಶಂಕರ ಬಾಳೇಕಾಯಿ, ಜಿ.ಪಂ. ಮಾಜಿ ಸದಸ್ಯರಾದ ಪ್ರಕಾಶ ಬನ್ನಿಕೋಡ, ಪಿ.ಡಿ. ಬಸನಗೌಡ್ರ, ಗ್ರಾ.ಪಂ. ಮಾಜಿ ಅಧ್ಯಕ್ಷ ರವೀಂದ್ರ ಮುದಿಯಪ್ಪನವರ, ರಾಘವೇಂದ್ರ ಹರವಿಶೆಟ್ಟರ್, ಬಸವರಾಜ ಆಡಿನವರ, ಪ್ರಶಾಂತ ದ್ಯಾವಕ್ಕಳವರ, ಸಿದ್ದನಗೌಡ ಪಾಟೀಲ, ವಿಕ್ರಮ ಕುಲಕರ್ಣಿ, ಜಟ್ಟೆಪ್ಪ ಮಳಗೊಂಡರ, ಸಿಬ್ಬಂದಿ ಚಂದ್ರಪ್ಪ ಮಳಗೊಂಡರ, ಮಾಲತೇಶ ಪಾಟೀಲ, ರಾಜಶೇಖರ ಬೆನ್ನೂರ, ನವೀನ್ ಅಂಗರಗಟ್ಟಿ, ಬಸಣ್ಣ ಉಪ್ಪಾರ ಮತ್ತು ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net