ಪಿ.ಎಂ. ರವಿಗೆ ಸನ್ಮಾನ

RAVI P.M 1
Published on

ಮಡಿಕೇರಿ:

ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ 50ನೇ ವರ್ಷದ ಸ್ವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ತುಳು ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಸದಸ್ಯ ಮಡಿಕೇರಿಯ ಪಿ.ಎಂ.ರವಿ ಅವರನ್ನು ಸನ್ಮಾನಿಸಲಾಯಿತು.

ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಲಿಪಿ, ಆಚಾರ ವಿಚಾರಗಳ ಬೆಳವಣಿಗೆಗೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ತಮ್ಮದೇ ಆದ ಕೊಡುಗೆ ನೀಡಿರುವ ಪಿ.ಎಂ.ರವಿ ಅವರ ಸಾಧನೆಯನ್ನು ಗುರುತಿಸಿ ಮಂಗಳೂರಿನ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ದಕ್ಷಿಣ ಕನ್ನಡ ಭಾಗದ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರು, ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ನ ಪದಾಧಿಕಾರಿಗಳು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net