ರಾಯಣ್ಣ ಜೀವನ ಚರಿತ್ರೆ ಸಾರುವ ' ರಾಕ್ ಗಾಡ್೯ನ' ಸಜ್ಜು!

IMG-20231214-WA0019.jpg
Published on

-ಸಚಿವ ಶಿವರಾಜ ತಂಗಡಗಿ ಪರಿಶೀಲನೆ
ಬೆಳಗಾವಿ: ಜಿಲ್ಲೆಯ ಸೈನಿಕ ಶಾಲೆಯ ಪಕ್ಕದಲ್ಲಿ 10 ಎಕರೆ ಪ್ರದೇಶದಲ್ಲಿ ಸಂಗೊಳ್ಳಿರಾಯಣ್ಣ ಸಮಗ್ರ ಜೀವನ ಚರಿತ್ರೆ ಸಾರುವ ರಾಕ್ ಗಾರ್ಡನ್ ಗೆ ಸಜ್ಜುಗೊಂಡಿದ್ದು, ಸ್ವತಃ ಸಚಿವ ಶಿವರಾಜ ತಂಗಡಗಿ
ಸಚಿವರೇ ಖುದ್ದಾಗಿ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
ಈಗಾಗಲೇ‌‌ ರಾಕ್ ಗಾರ್ಡನ್ ನಲ್ಲಿ‌ ಬಹುತೇಕ‌‌ ಕಾಮಗಾರಿಗಳು ಪೂರ್ಣಗೊಂಡಿದ್ದು, ಶೀಘ್ರವೇ ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅವರು ರಾಕ್ ಗಾರ್ಡನ್ ಉದ್ಘಾಟಿಸಲಿದ್ದಾರೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.‌
ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಲ್ಲೇಶಪ್ಪ ಹೊರಪೇಟೆ, ಸೈನಿಕ ಶಾಲೆ ಪ್ರಾಂಶುಪಾಲ ಕೆ.ಟಿ.ಕರಮಚಂದನ್ ಇತರರಿದ್ದರು.

-ಕೋಟ್ಸ್-
ನಮ್ಮ ಸೈನಿಕ ಶಾಲೆಯ ಮಕ್ಕಳಲ್ಲಿ ಕೇವಲ ಅಕ್ಷರಏಕತೆಯನ್ನು ಬೀಜ ಬಿತ್ತದೆ ರಾಷ್ಟ್ರೀಯ ಏಕತೆ, ಸಮಗ್ರತೆ, ದೇಶಭಕ್ತಿ, ಸಾಮಾಜಿಕ ಹೊಣೆಗಾರಿಕೆ ನಿಭಾಯಿಸುವು ದನ್ನೂ ಕಲಿಸಿಕೊಡಲಾಗುತ್ತದೆ. ಹಾಗೆಯೇ ಇತರರತ್ತ ಬೆರಳು ಮಾಡದೆ ತನ್ನ ಬದ್ಧತೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವಂಥ ಶಿಕ್ಷಣ ನೀಡಲಾಗುತ್ತದೆ.
-ಶಿವರಾಜ್ ತಂಗಡಗಿ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net