ಬೆಳಗಾವಿಗೆ 'ಚನ್ನಮ್ಮ', ಹುಬ್ಬಳ್ಳಿಗೆ 'ರಾಯಣ್ಣ'  ನಾಮಕರಣಕ್ಕೆ ಶಿಫಾರಸ್ಸು!

99065064.jpg
Published on


-ರಾಜ್ಯದ 4 ವಿಮಾನ  ನಿಲ್ದಾಣಗಳಿಗೆ ನಾಮಕರಣ ನಿರ್ಣಯ
ಬೆಳಗಾವಿ: ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ಪುರುಷರ ಹೆಸರುಗಳನ್ನು ನಾಮಕರಣ ಮಾಡಲು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಕಳುಹಿಸುವ ಮಹತ್ವದ ವಿಷಯ ಕುರಿತು ವಿಧಾನಸಭೆಯ  ಕಲಾಪದ ವೇಳೆ ಈ ಐತಿಹಾಸಿಕ ಶಿಫಾರಸ್ಸು ನಿರ್ಣಯವನ್ನು ಕೈಗೊಳ್ಳಲಾಯಿತು.
ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟçಕವಿ ಡಾ. ಕೆ.ವಿ. ಪುಟ್ಟಪ್ಪ ಕುವೆಂಪು ಮತ್ತು ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಜಗಜ್ಯೋತಿ ಬಸವೇಶ್ವರ ನಾಮಕರಣಗೊಳಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಮೂಲ ಸೌಕರ್ಯ ಸಚಿವ ಎಂ.ಬಿ. ಪಾಟೀಲ ಅವರು ಉಭಯ ಸದನಗಳಲ್ಲಿ ಅನುಮೋದನೆಗೊಂಡ ನಿರ್ಣಯವನ್ನು ಡಿಸೆಂಬರ್ 14ರಂದು ವಿಧಾನಸಭೆಯಲ್ಲಿ ಮಂಡಿಸಿದರು.
ನಿರ್ಣಯವನ್ನು ಬೆಂಬಲಿಸಿ ವಿಪಕ್ಷ ನಾಯಕ ಆರ್. ಅಶೋಕ, ಶಾಸಕರಾದ ಅರವಿಂದ ಬೆಲ್ಲದ, ಎನ್.ಹೆಚ್. ಕೊನರೆಡ್ಡಿ, ಅರಗ ಜ್ಞಾನೇಂದ್ರ ಸೇರಿದಂತೆ ಇತರರು ಅಭಿನಂದಿಸಿ ಮಾತನಾಡಿದರು.
ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು, ಸಭೆಯಲ್ಲಿ ಪ್ರಸ್ತಾಪಿಸಿ ಸದನವು ಸರ್ವಾನುಮತದಿಂದ ಅಂಗೀಕರಿಸಿದೆ ಎಂದು ತಿಳಿಸಿದರು. ಸಚಿವ ಎಂ.ಬಿ. ಪಾಟೀಲ ಅವರು ಉಭಯ ಸದನಗಳಲ್ಲಿ ಅಂಗೀಕೃತಗೊಂಡಿರುವ ಈ ನಿರ್ಣಯವನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಸದನದಲ್ಲಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net