ಉಕ್ಕಿನ ನಗರಿಯಲ್ಲಿ ರಾಯರ ಆರಾಧನಾ ಮಹೋತ್ಸವ ಸಂಭ್ರಮ

31bdvt3
Published on

ಭದ್ರಾವತಿ: ಶ್ರೀ ರಾಘವೇಂದ್ರಸ್ವಾಮಿಗಳ 352ನೇ ಆರಾಧನಾ ಮಹೋತ್ಸವವನ್ನು ಗುರುವಾರ ಹಳೇನಗರದ ಶ್ರೀ ರಾಘವೇಂದ್ರಸ್ವಾಮಿ ಮಠ ಹಾಗೂ ಜನ್ನಾಪುರದ ರಾಯರ ಮಠಗಳಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.

ಆರಾಧನಾ ಮಹೋತ್ಸವದ ಅಂಗವಾಗಿ ಸ್ವಾಮಿಗೆ ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು. ವಿಶೇಷ ಅಲಂಕಾರ ಮಾಡಲಾಗಿತ್ತು. ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಭಜನಾ ಕಾರ್ಯಕ್ರಮಗಳು ಜರುಗಿದವು.
ಮುರಳೀಧರ ತಂತ್ರಿ, ಸುಮಾ ರಾಘವೇಂದ್ರ, ಜಿ.ರಮಾಕಾಂತ, ನಿರಂಜನಾಚಾರ್. ವಿದ್ಯಾ ನಂದನಾಯಕ್, ಶುಭಾ ಗುರುರಾಜ್, ಸುಪ್ರಿತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net