ರಾಯರಕೊಪ್ಪಲು-ಬೆಂಗಳೂರು ಮಾರ್ಗಸ ಬಸ್ ಸಂಚಾರಕ್ಕೆ ಚಾಲನೆ

IMG-20241017-WA0042(1)
ಆಲೂರು ತಾಲೂಕಿನ ರಾಯರಕೊಪ್ಪಲು ಗ್ರಾಮದಲ್ಲಿ ನೂತನ ಬಸ್ ಸಂಚಾರಕ್ಕೆ ಶಾಸಕ ಸಿಮೆಂಟ್ ಮಂಜು ಶುಕ್ರವಾರ ಚಾಲನೆ ನೀಡಿದರು. ರೇಣುಕಾ, ನಂಜುಂಡಪ್ಪ, ಪೂವಯ್ಯ, ಶಶಿಧರ್, ಚೇತನ್, ಹರೀಶ್ ಇತರರಿದ್ದರು.
Published on

ಆಲೂರು: ಮೂಲ ಸೌಕರ್ಯಗಳು ಬಲವರ್ಧನೆಗೊಂಡರೆ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ತಾಲೂಕಿನ ಕೆಂಚಮ್ಮ ಹೊಸಕೋಟೆ ಹೋಬಳಿ ರಾಯರಕೊಪ್ಪಲು ಗ್ರಾಮದಿಂದ ಹಾಸನ ಮಾರ್ಗವಾಗಿ ಬೆಂಗಳೂರಿನವರೆಗೆ ನೂತನ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ರಾಯರಕೊಪ್ಪಲು ಗ್ರಾಮದಿಂದ ನಿತ್ಯ ಹಾಸನ ಹಾಗೂ ಬೆಂಗಳೂರು ನಗರಕ್ಕೆ ಹೋಗಿ ಬರಲು ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಕಾರ್ಮಿಕರಿಗೆ ಹಲವು ದಿನಗಳಿಂದ ಸಮಸ್ಯೆ ಎದುರಿಸುತ್ತಿದ್ದರು. ಹೀಗಾಗಿ ಗ್ರಾಮಕ್ಕೆ ಸೂಕ್ತ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂಬುದು ಗ್ರಾಮಸ್ಥರ ಹಲವು ದಿನಗಳ ಬೇಡಿಕೆಯಾಗಿತ್ತು. ಹೀಗಾಗಿ ಜನರ ಬೇಡಿಕೆಗೆ ಸ್ಪಂದಿಸಿ ಸಾರಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ರಾಯರಕೊಪ್ಪಲು ಗ್ರಾಮಕ್ಕೆ ನೂತನ ಬಸ್ ವ್ಯವಸ್ಥೆ ಕಲ್ಪಿಸುವ ಮೂಲಕ ಸಾರಿಗೆ ಸಮಸ್ಯೆ ಬಗೆಹರಿಸಲಾಗಿದೆ. ನಿತ್ಯ ಬೆಳಗ್ಗೆ 5 ಗಂಟೆಯಿಂದ ರಾಯರಕೊಪ್ಪಲು ಗ್ರಾಮದಿಂದ ಬೆಂಗಳೂರಿಗೆ ಬಸ್ ಸಂಚರಿಸಿ ಮತ್ತೆ ರಾತ್ರಿ 9 ಗಂಟೆಗೆ ರಾಯರಕೊಪ್ಪಲು ಗ್ರಾಮಕ್ಕೆ ಬಂದು ನಿಲ್ಲುವುದು ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳು, ರಾಯರಕೊಪ್ಪಲು ಗ್ರಾಮಕ್ಕೆ ಬಸ್ ಸಂಚಾರ ಕಲ್ಪಿಸಿದಕ್ಕೆ ಸಂತಸವಾಗಿದೆ. ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಬೇಕಾದರೆ ಬಹಳ ತೊಂದರೆಯಾಗುತ್ತಿತ್ತು. ಪ್ರತಿದಿನ ಬಸ್ ಗಾಗಿ ಕಾದು ಕುಳಿತು ಸಂಚಾರ ಮಾಡಲು ಆಸನಗಳು ಸಿಗುತ್ತಿರಲಿಲ್ಲ. ಆದರೆ ಇದೀಗ ಬಸ್ ವ್ಯವಸ್ಥೆ ಮಾಡಿರುವುದರಿಂದ ಆ ಸಮಸ್ಯೆ ಇರುವುದಿಲ್ಲ ಎಂದು ಸಂತಸ ಹಂಚಿಕೊಂಡರು.

ಹಾಸನ ಕೆಎಸ್‌ಆರ್‌ಟಿಸಿ ಸಂಚಾರ ನಿಯಂತ್ರಣಾಧಿಕಾರಿ ರೇಣುಕಾ, ಗ್ರಾಮದ ಹಿರಿಯ ಮುಖಂಡ ನಂಜುಂಡಪ್ಪ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೂವಯ್ಯ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಶಶಿಧರ್, ಮಗ್ಗೆ ಗ್ರಾಮ ಪಂಚಾಯಿತಿ ಸದಸ್ಯ ಚೇತನ್, ಹರೀಶ್, ಕುಮಾರ್, ಚೇತನ್, ಧರಣಿ, ಸತೀಶ್, ಹರ್ಷ ಕೆಂಚಾಂಬ, ರಾಜಣ್ಣ, ಸತೀಶ್ ಶಿಗಾವರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net