ರಾಯರೆಡ್ಡಿ ಸತ್ಯ ನುಡಿದಿದ್ದಾರೆ,  ಶಾಸಕ ಟೆಂಗಿನಕಾಯಿ ಹೇಳಿಕೆ

Published on

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರೇ ಕರ್ನಾಟಕದಲ್ಲಿನ ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಿರುವುದು ಅಕ್ಷರಶಃ ಸತ್ಯವಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಆಡಳಿತ ಪಕ್ಷದ ಪ್ರಮುಖ ಹುದ್ದೆಯಲ್ಲಿರುವ ಮುಖಂಡರೊಬ್ಬರು ಕರ್ನಾಟಕ ಸರ್ಕಾರ ಕುರಿತು ಸಾರ್ವಜನಿಕವಾಗಿ ಹೇಳಿದ್ದು ಅವರಿಗೆ ಸತ್ಯದ ಅರಿವಾಗಿದೆ. ವಿರೋಧ ಪಕ್ಷವಾಗಿ ಬಿಜೆಪಿಯು ಕಾಂಗ್ರೆಸ್ ಸರ್ಕಾರ ಬಂದಾಗಿನಿಂದಲೂ ಆರೋಪ ಮಾಡಿದ್ದನ್ನು ರಾಯರೆಡ್ಡಿ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಇದನ್ನು ನಾವು ಸ್ವಾಗತಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಆಡಳಿತ ಪಕ್ಷದವರೇ ಬಹಿರಂಗವಾಗಿ ಒಪ್ಪಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವು ಎಚ್ಚೆತ್ತುಕೊಳ್ಳದೇ ಕರ್ನಾಟಕದ ಮಾನವನ್ನು ಹರಾಜು ಹಾಕುತ್ತಿದೆ. ಈ ವಿಷಯ ದೇಶಾದ್ಯಂತ ಚರ್ಚೆಯಾಗುತ್ತಿದೆ ಎಂದು ಶಾಸಕರು ಹೇಳಿದರು.

ಕಾಂಗ್ರೆಸ್ ನವರು ಐದು ಗ್ಯಾರಂಟಿಗಳ ಹೆಸರಲ್ಲಿ ಜನರಿಗೆ ವಂಚಿಸಿ ಅಧಿಕಾರಕ್ಕೆ ಬಂದಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯೆ ಈ ಸರ್ಕಾರದ ಗ್ಯಾರಂಟಿಯಾಗಿದೆ. ಅದರಲ್ಲಿಯೂ ಸಹ ದಾಖಲೆ ಬರೆದಿದ್ದಾರೆ ಎಂದು ಟೆಂಗಿನಕಾಯಿ ಟೀಕಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net