ನಂಜನಗೂಡಿನಲ್ಲಿ ರಾಯರ ಆರಾಧನಾ ಮಹೋತ್ಸವ

Oplus_16908288
ನಂಜನಗೂಡಿನ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ 354ನೇ ಆರಾಧನಾ ಮಹೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ ನೆರವೇರಿದವು.
Published on

ನಂಜನಗೂಡು: ನಗರದ ರಾಷ್ಟ್ರಪತಿ ರಸ್ತೆಯಲ್ಲಿರುವ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ವರ್ಷದ ಆರಾಧನಾ ಮಹೋತ್ಸವ ಅಂಗವಾಗಿ ಭಾನುವಾರ ಪೂರ್ವಾರಾಧನೆ ಸೇರಿದಂತೆ ಸಕಲ ಧಾರ್ಮಿಕ ಪೂಜಾ ಕೈಂಕರ್ಯ ನೆರವೇರಿದವು.

ಶ್ರೀ ರಾಘವೇಂದ್ರಸ್ವಾಮಿ ಅವರ ವಿಗ್ರಹವಿರುವ ಏಕೈಕ ಮಠ ಎನ್ನುವ ಹೆಗ್ಗಳಿಕೆ ಹೊಂದಿರುವ ಈ ದೇಗುಲದಲ್ಲಿ ಭಾನುವಾರ ಮುಂಜಾನೆ ರಾಯರ ಪಾದಪೂಜೆ, ಪಂಚಾಮೃತ ಸೇವೆ ಸೇರಿದಂತೆ ಮಹಾಮಂಗಳಾರತಿ ನೆರವೇರಿಸಿ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ವಿದ್ವಾನ್ ಭಾನುಸಿಂಹ ಅವರು ದಾಸವಾಣಿ ನಡೆಸಿಕೊಟ್ಟರು.

ಶ್ರೀ ರಾಘವೇಂದ್ರಸ್ವಾಮಿ ಬೃಂದಾವನ ಪ್ರವೇಶ ಮಾಡಿದ 354ನೇ ವರ್ಷದ ಸುದಿನವಾದ ಸೋಮವಾರ ಹಲವು ಧಾರ್ಮಿಕ ಪೂಜಾ ಕಾರ್ಯ ನಡೆಸಿ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಗಿತ್ತು. ಆ.12ರಂದು ಶ್ರೀ ಮಠದ ಪ್ರಕಾರದಲ್ಲಿ ಮಹಾರಥೋತ್ಸವ ಜರುಗಲಿದೆ. ಆ.13ರಂದು ಸುಜ್ಞಾನೇಂದ್ರ ತೀರ್ಥರ ಆರಾಧನೆ ನಡೆಯಲಿದೆ.

ಆರಾಧಾನಾ ಮಹೋತ್ಸವ ಅಂಗವಾಗಿ ಮಠದ ಆವರಣ ಸುತ್ತ ಹೂವಿನ ಅಲಂಕಾರ ಮಾಡಲಾಗಿತ್ತು. ಸಂಜೆ ವೇಳೆ ಸಿ.ಎಸ್.ಕೇಶವಚಂದ್ರ ಅವರಿಂದ ಕರ್ನಾಟಕ ಶಾಸ್ತ್ರೀಯ ವೇಣುವಾದನ ಹಾಗೂ ವಿದ್ವಾನ್ ಚಂದನ್‌ಕುಮಾರ್ ಅವರಿಂದ ಕೊಳಲುವಾದನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಠದ ವ್ಯವಸ್ಥಾಪಕ ಕೆ.ಸುಧಾಕರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net